ETV Bharat / state

ಡಿನೋಟಿಫಿಕೇಷನ್: ಸಿಎಂ ಬಿಎಸ್​ವೈಗೆ ರಿಲೀಫ್​ ನೀಡಿದ ಸುಪ್ರೀಂಕೋರ್ಟ್​ - ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸುಪ್ರೀಂ ತಡೆಯಾಜ್ಞೆ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಮಾರ್ಚ್​ 21 ರಂದು ಹೈಕೋರ್ಟ್‌ ನೀಡಿರುವ ಆದೇಶಕ್ಕೆ ಸರ್ವೋಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

Plea filed by Karnataka Chief Minister B.S. Yediyurppa against March 21
ಸಿಎಂ ಬಿಎಸ್​ವೈಗೆ ರಿಲೀಫ್​ ನೀಡಿದ ಸುಪ್ರೀಂ ಕೋರ್ಟ್​
author img

By

Published : Apr 5, 2021, 12:28 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆಯಾಜ್ಞೆ ನೀಡಿದೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್‌ ನಿರಾಣಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಬಿಎಸ್​ವೈ ವಿರುದ್ಧ ವಿಚಾರಣೆಗೆ ತಡೆ ನೀಡಿದೆ.

ಏನಿದು ಪ್ರಕರಣ?

2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾರೆ ಎಂದು ಉದ್ಯಮಿ ಎ.ಅಲಂ ಪಾಷಾ ಅವರು ಆರೋಪ ಮಾಡಿದ್ದರು.

ಈ ಸಂಬಂಧ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ 2019ರಲ್ಲಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು‌. ಜನವರಿ 5ರಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಜಾಗೊಳಿಸಿ, ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.