ಬೆಂಗಳೂರು : ಧವಳಗಿರಿ ನಿವಾಸಕ್ಕೆ ಇಂದು ಪ್ರಧಾನಿ ಮೋದಿ ಸಹೋದರ ಆಗಮಿಸಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿದ ಪ್ರಹ್ಲಾದ್ ದಾಮೋದರ ದಾಸ್ ಮೋದಿ, ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದರು. ಪ್ರಹ್ಲಾದ್ ಮೋದಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಅವರು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದರು. ಈ ವೇಳೆ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸುಮಾರು ಹದಿನೈದು ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಪ್ರಹ್ಲಾದ್ ಮೋದಿ ಅಖಿಲ ಭಾರತೀಯ ನ್ಯಾಯ ಬೆಲೆ ಅಂಗಡಿ ಡೀಲರ್ಗಳ ಒಕ್ಕೂಟದ ಉಪಾಧ್ಯಕ್ಷರೂ ಹೌದು.