ETV Bharat / state

ಪ್ರಧಾನಿ ರಾಜ್ಯ ಪ್ರವಾಸ: ಮೋದಿ ವಿಡಿಯೋ ಸಂವಾದದಲ್ಲಿ ಸಿಎಂ ಬೊಮ್ಮಾಯಿ ಭಾಗಿ - ಮೋದಿ ವೀಡಿಯೋ ಸಂವಾದದಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ ಸಿಎಂ, ಪ್ರಧಾನಿಗಳ ಎರಡು ದಿನಗಳ ಪ್ರವಾಸ ಸಿದ್ಧತೆಗಳ ಅವಲೋಕನ ಮಾಡಿದರು.

PM modi karnataka tour
ಪ್ರಧಾನಿ ರಾಜ್ಯ ಪ್ರವಾಸ
author img

By

Published : Jun 9, 2022, 11:04 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ತಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟು ನಿಟ್ಟಿನ‌ ಸೂಚನೆ ನೀಡಿದರು.

ಅಲ್ಲದೇ, ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಸಿಎಂ, ಪ್ರಧಾನಿಗಳ ಎರಡು ದಿನಗಳ ಪ್ರವಾಸ ಸಿದ್ಧತೆಗಳ ಅವಲೋಕನ ಮಾಡಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಬೆಳಗ್ಗೆ ವಿಧಾನಸೌಧಕ್ಕೆ ಬಂದು ಸೇರುವಂತೆ ಪಕ್ಷದ ಶಾಸಕರಿಗೆ ಸಿಎಂ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.