ETV Bharat / state

ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳರ ದೇವಾಲಯ: ಪಿಎಂ ಮೋದಿ, ಸಿಎಂ ಸಿದ್ದರಾಮಯ್ಯ ಹರ್ಷ

ಶ್ರೀಮಂತ ಕಲೆ, ವಾಸ್ತುಶಿಲ್ಪಗಳನ್ನು ಹೊಂದಿರುವ ಹೊಯ್ಸಳರ ಕಾಲದ ದೇವಾಲಯಗಳು ಯುನೆಸ್ಕೋ ವಿಶ್ವಪಾರಂಪರಿಕ ತಾಣದ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

Hoysala temples PM Modi and CM Siddaramaih
ಹೊಯ್ಸಳರ ದೇವಾಲಯ, ಪಿಎಂ ಮೋದಿ, ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 19, 2023, 7:15 AM IST

ಬೆಂಗಳೂರು: ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಪ್ರಸಿದ್ಧ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

  • ಭಾರತಕ್ಕೆ ಮತ್ತಷ್ಟು ಹೆಮ್ಮೆ!

    ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು @UNESCO ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸೂಕ್ಷ್ಮ ಕುಸುರಿ ಕೆಲಸಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಿಕರ ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. https://t.co/cOQ0pjHr95

    — Narendra Modi (@narendramodi) September 18, 2023 " class="align-text-top noRightClick twitterSection" data=" ">

ವಿಶ್ವಮಟ್ಟದ ಮೂಲಸೌಲಭ್ಯ, ಸುರಕ್ಷತೆ ಒದಗಿಸಲು ಬದ್ಧ: ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ, "ಇದು ಖುಷಿ, ಹೆಮ್ಮೆಯ ಸಂಗತಿ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಐತಿಹಾಸಿಕ ಸ್ಥಳಗಳು ಮತ್ತು ಪುಣ್ಯಕ್ಷೇತ್ರಗಳ ತೊಟ್ಟಿಲು ಕರ್ನಾಟಕಕ್ಕೆ ಸ್ವಾಗತ" ಎಂದಿದ್ದಾರೆ.

  • ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ ಕೂಡ.
    ನಾಡಿನ ಪ್ರವಾಸಿ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ.

    ಐತಿಹಾಸಿಕ ಸ್ಥಳಗಳು ಮತ್ತು ಪುಣ್ಯಕ್ಷೇತ್ರಗಳ… https://t.co/e1H58oc0yb

    — Siddaramaiah (@siddaramaiah) September 18, 2023 " class="align-text-top noRightClick twitterSection" data=" ">

ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿ: ಪ್ರಧಾನಿ ಮೋದಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. "ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸೂಕ್ಷ್ಮ ಕುಸುರಿ ಕೆಲಸಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಿಕರ ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿದೆ" ಎಂದು ಅಭಿನಂದಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯದ ವಿಶ್ವ ಪಾರಂಪರಿಕ ತಾಣಗಳು ಯಾವುವು?: ಕರ್ನಾಟಕದಲ್ಲಿ ಈಗಾಗಲೇ 5 ತಾಣಗಳು ಯುನೆಸ್ಕೋ ವಿಶ್ವಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿವೆ. ಹಂಪಿ, ​ಪಟ್ಟದಕಲ್ಲು-ಬಾದಾಮಿ-ಐಹೊಳೆ, ​ಬೀದರ್-ಬಿಜಾಪುರ- ಗುಲ್ಬರ್ಗಾದ ಸ್ಮಾರಕಗಳು, ​ಶ್ರೀರಂಗಪಟ್ಟಣದ ಸ್ಮಾರಕಗಳು, ​ಬೇಲೂರು ಹಾಗೂ ಹಳೇಬೀಡು ಯುನೆಸ್ಕೋ ವಿಶ್ವಪರಂಪರೆ ಪಟ್ಟಿಗೆ ಸೇರಿ ಸ್ಮಾರಕಗಳಾಗಿವೆ.

ಭಾರತದ 42 ತಾಣಗಳಿಗೆ ಅಂತರರಾಷ್ಟ್ರೀಯ ಮನ್ನಣೆ: ಬೇಲೂರಿನ ಚೆನ್ನಕೇಶವ ದೇವಾಲಯ, ಹಳೇಬೀಡು, ಮೈಸೂರಿನ ಸೋಮಾನಾಥಪುರದಲ್ಲಿರುವ ಹೊಯ್ಸಳರ ದೇವಾಲಯಗಳಿಗೆ ಈ ಗರಿಮೆ ಸಿಕ್ಕಿದೆ. ಈ ಮೂಲಕ ಭಾರತದ 42 ತಾಣಗಳು ಅಂತರರಾಷ್ಟ್ರೀಯ ಮನ್ನಣೆ ಪಡೆದಂತಾಗಿದೆ.

ಈ ಬಗ್ಗೆ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಯುನೆಸ್ಕೋ, ಹೊಯ್ಸಳರ ಕಾಲದಲ್ಲಿ ನಿರ್ಮಾಣ ಮಾಡಲಾಗಿರುವ ವಿಶಿಷ್ಠ ಮತ್ತು ವಿಶೇಷ ವಾಸ್ತುಶಿಲ್ಪದ ಕೆತ್ತನೆಗಳು ಇದೀಗ ಯುನೆಸ್ಕೋ ವಿಶ್ವಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಭಾರತಕ್ಕೆ ಅಭಿನಂದನೆಗಳು ಎಂದಿದೆ. ಹೊಯ್ಸಳ ದೇವಾಲಯ 2014ರಿಂದ ವಿಶ್ವಪಾರಂಪರಿಕ ತಾಣಗಳ ಸಂಭಾವ್ಯ ಪಟ್ಟಿಯಲ್ಲಿತ್ತು. ಕೊನೆಗೂ ಮಾನ್ಯತೆ ಗಿಟ್ಟಿಸಿಕೊಂಡಿದೆ.

ಕಳೆದ ವರ್ಷ ನಾಮನಿರ್ದೇಶನ: 2022- 23ರ ವಿಶ್ವ ಪಾರಂಪರಿಕ ಪಟ್ಟಿಗೆ ಕರ್ನಾಟಕದ ಐತಿಹಾಸಿಕ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು ಯುನೆಸ್ಕೋ (UNESCO) ವಿಶ್ವ ಪಾರಂಪರಿಕ ಪಟ್ಟಿಗೆ ಭಾರತ ನಾಮನಿರ್ದೇಶನ ಮಾಡಿತ್ತು. ಇದೀಗ ದೇವಾಲಯಗಳನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಯುನೆಸ್ಕೋದ ಭಾರತದ ಪ್ರತಿನಿಧಿ ವಿಶಾಲ್​ ಶರ್ಮಾ ಸೋಮವಾರ ಘೋಷಿಸಿದ್ದರು.

ಇದನ್ನೂ ಓದಿ: ರಾಜ್ಯಕ್ಕೆ ಮತ್ತೊಂದು ಹೆಮ್ಮೆಯ ಗರಿ.. ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.