ETV Bharat / state

ಕೋವಿಡ್ ವಿರುದ್ಧ ಹೋರಾಟ: ರಾಜ್ಯದ ಪ್ರಯತ್ನಗಳಿಗೆ ಪ್ರಧಾನಿ ಶ್ಲಾಘನೆ - ಕರ್ನಾಟಕ ಪ್ರಯತ್ನಕ್ಕೆ ಮೋದಿ ಮೆಚ್ಚುಗೆ

ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು.

PM Modi appreciates Karnataka
ಮೋದಿ ಜೊತೆ ಸಂವಾದ
author img

By

Published : Jun 17, 2020, 6:26 PM IST

ಬೆಂಗಳೂರು: ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಕ್ರಾಮಿಕದ ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪರಿಸ್ಥಿತಿ ಬಗ್ಗೆ ಮೊದಲು ಸಿಎಂ ಹತ್ತು ನಿಮಿಷಗಳ ಕಾಲ ಪ್ರಧಾನಿಯವರಿಗೆ ವಿವರಣೆ ನೀಡಿದರು. ಬಳಿಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸುಮಾರು 15 ನಿಮಿಷಗಳ ಕಾಲ ಕೊರೊನಾ ಪರಿಸ್ಥಿತಿ ಬಗ್ಗೆ ಪಿಪಿಟಿ ಪ್ರೆಸೆಂಟೇಷನ್ ನೀಡಿದರು. ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು, ಸದ್ಯ ರಾಜ್ಯದಲ್ಲಿ ಕೊರೋನಾ ಸೋಂಕು, ಸಾವು, ಪರೀಕ್ಷೆಗಳ ಬಗ್ಗೆ ವಿವರಣೆ ನೀಡಿದರು.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್

ವೀಡಿಯೋ ಸಂವಾದದಲ್ಲಿ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ 5ಟಿ ತತ್ವವನ್ನು ವಿವರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನಿರಂತರವಾಗಿ ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್​ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ 72ಕ್ಕೆ ಹೆಚ್ಚಿದ್ದು, ಪರೀಕ್ಷಾ ಸಾಮರ್ಥ್ಯ ದಿನಕ್ಕೆ 15 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7,500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ. 1.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇಕಡಾ 3.6 ರಷ್ಟಿದೆ ಎಂದು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು.

ಕೋವಿಡ್ ವಾರ್ ರೂಂ ಸ್ಥಾಪನೆಯ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದ್ದು, ತಜ್ಞ ವೈದ್ಯರೊಂದಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ನಿರಂತರ ಸಂಪರ್ಕದಲ್ಲಿದ್ದು ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಪ್ರಾತ್ಯಕ್ಷಿಕೆ ನೀಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ತಂತ್ರಜ್ಞಾನದ ಬಳಕೆ, ತರಬೇತಿ ಕಾರ್ಯಕ್ರಮಗಳು, ಪಂಚಾಯತ್ ಮಟ್ಟದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು.

ರಾಜ್ಯಗಳು ಇನ್ನು ಅನ್​ಲಾಕ್ ನತ್ತ ಹೆಜ್ಜೆ ಇಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ ಎಂದು ಮೋದಿ ಸಲಹೆ ನೀಡಿದರು. ಆತ್ಮನಿರ್ಭರ್ ಪ್ಯಾಕೇಜ್ ಆರ್ಥಿಕ ಚಟುವಟಿಕೆ ಚುರುಕುಗಾಗಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಾಕ್ ಡೌನ್ ಸಡಿಲಿಕೆ ಪ್ರಸ್ತಾಪ ಇಲ್ಲ:

ಲಾಕ್​ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡುವ ಕುರಿತು ಹೇಳಿಕೆ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿ ಜೊತೆಗಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ ಎನ್ನಲಾಗಿದೆ. ಸಭೆಯ ಪ್ರಾರಂಭದಲ್ಲಿ ಲಡಾಖ್​ನಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.