ETV Bharat / state

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ.. ಜಿ20 ಇಂಡಿಯಾ ಎನರ್ಜಿ ವೀಕ್​ಗೆ ಚಾಲನೆ

ಬೆಂಗಳೂರಿನಲ್ಲಿ ಬಂದಳಿದ ಪ್ರಧಾನಿ ನರೇಂದ್ರ ಮೋದಿ.. ಜಿ20 ಇಂಡಿಯಾ ಎನರ್ಜಿ ವೀಕ್​ಗೆ ಚಾಲನೆ ನೀಡಲಿರುವ ಪಿಎಂ.. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಹಿನ್ನೆಲೆ ಪೊಲೀಸರಿಂದ ಸರ್ಪಗಾವಲು

author img

By

Published : Feb 6, 2023, 11:02 AM IST

PM Modi arrives Bengaluru  inaugurates India Energy Week  open HAL helicopter factory  PM Modi news
ಸಿಲಿಕಾನ್​ ಸಿಟಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ) ಯಲ್ಲಿ ಇಂದು ನಡೆಯುವ ಜಿ20 ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದರು. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳಲಿದ್ದಾರೆ.

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಐಇಸಿಯಲ್ಲಿ ನಾಲ್ಕು ಹೆಲಿಪ್ಯಾಡ್​ಗಳ ನಿರ್ಮಾಣ ಸಹ ಮಾಡಲಾಗಿದೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ 11.30ಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಿಐಇಸಿ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಧಾನಿ ಅವರ ಆಗಮನದ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆಯನ್ನು ಪರಿಶೀಲಿಸಿದ್ದರು. ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಗಣ್ಯರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಪ್ರಧಾನಿ ಅವರು ಬರುತ್ತಿರುವ ಹಿನ್ನೆಲೆ ಮಾರ್ಗಗಳಲ್ಲೂ ಬದಲಾವಣೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಪ್ರವಾಸ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ತುಮಕೂರಿನಲ್ಲಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿಯೇ ದೆಹಲಿಗೆ ವಾಪಸಾಗಲಿದ್ದಾರೆ. ಚುನಾವಣಾ ಮುನ್ನ ಮೋದಿ ಅವರ ಸರಣಿ ರಾಜ್ಯ ಭೇಟಿ ರಾಜ್ಯ ಬಿಜೆಪಿಗೆ ಬೂಸ್ಟರ್ ಡೋಸ್​ನಂತಾಗಿದೆ.

ಪ್ರಧಾನಿ ಕಾರ್ಯಕ್ರಮದ ವಿವರ: ಸೋಮವಾರ ಬೆಳಗ್ಗೆ 8.20ಕ್ಕೆ ವಾಯುಪಡೆ ವಿಮಾನದಲ್ಲಿ ನವದೆಹಲಿಯಿಂದ ಪ್ರಯಾಣಿಸಲಿರುವ ಪ್ರಧಾನಿ ನರೇಂದ್ರ ಮೋದಿ 10.55ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆ. 11.20ಕ್ಕೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 11.25ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಹೆಲಿಪ್ಯಾಡ್ ತಲುಪಲಿದ್ದಾರೆ. 11.30ಕ್ಕೆ ಇಂಧನ ಸಪ್ತಾಹ ಉದ್ಘಾಟಿಸಿ 2.30ರ ವರೆಗೂ ಇಂಡಿಯಾ ಎಜೆರ್ಜಿ ವೀಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

2.40ಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ನರೇಂದ್ರ ಮೋದಿ 3.25ಕ್ಕೆ ತುಮಕೂರು ತಲುಪಲಿದ್ದಾರೆ. 3.30ಕ್ಕೆ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ದೃಷ್ಟಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಲೋಕಾರ್ಪಣೆ ನೆರವೇರಿಸಲಿದ್ದಾರೆ.ಇದರ ಬಳಿಕ ಪ್ರಧಾನಮಂತ್ರಿ ಅವರು ಚೆನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್​ನ ಭಾಗವಾದ ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸುವರು.

ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸುವರು. 3.30 ರಿಂದ 4.30ರ ವರೆಗೆ ತುಮಕೂರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.40ಕ್ಕೆ ತುಮಕೂರಿನಿಂದ ಹೆಲಿಕಾಪ್ಟರ್ ಮೂಲಕ ತಮಕೂರಿನಿಂದ ಹೊರಟು ಸಂಜೆ 5.15ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವರು, 5.20ಕ್ಕೆ ವಾಯುಪಡೆ ವಿಮಾನದ ಮೂಲಕ ನವದೆಹಲಿಗೆ ವಾಪಸ್ಸಾಗಲಿದ್ದು, ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ.

ಓದಿ: ಮೋದಿ ಸರ್ಕಾರದಿಂದ ಭಾರತದ ಭವಿಷ್ಯಕ್ಕೆ ಭದ್ರ ತಳಹದಿ: ಸಂಸದ ತೇಜಸ್ವಿ ಸೂರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.