ETV Bharat / state

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ 72 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿ - PM Modi birthday

ಪ್ರಧಾನಿ ನರೇಂದ್ರ ಮೋದಿ 72 ನೇ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗಿದೆ. ಆದರೆ ಇಲ್ಲೊಬ್ಬ ಅಭಿಮಾನಿ ದೇಶದ 72 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.

PM Fan offers special pooja in 72 temples
72 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿ
author img

By

Published : Sep 18, 2022, 2:17 PM IST

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬಕ್ಕೆ ಅಭಿಮಾನಿಯೊಬ್ಬರು ದೇಶದ 72 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಭಿನ್ನವಾಗಿ ಆಚರಿಸಿದ್ದಾರೆ.

ಮೋದಿ ಅವರ ಅಭಿಮಾನಿ, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಮಹೇಶ್ ವಿಕ್ರಮ್ ಹೆಗ್ಡೆ ಎಂಬುವವರು ತಮ್ಮ ವಿಕ್ರಮ್​ ಫೌಂಡೇಶನ್ ಮೂಲಕ ಮೋದಿ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಈ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

PM Fan offers special pooja in 72 temples
72 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿ

ಕನ್ಯಾಕುಮಾರಿಯಿಂದ ಹಿಮಾಲಯದವರೆಗೂ ಒಟ್ಟು 72 ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ರುದ್ರಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ‌ ಸೇರಿದಂತೆ ವಿಶೇಷ ಪೂಜೆಗಳನ್ನು ಇವರು ನೆರವೇರಿಸಿದ್ದಾರೆ.

ಗೋಕರ್ಣ, ಶ್ರೀಶೈಲ, ಶಿರಡಿ ಸೇರಿದಂತೆ ರಾಜ್ಯದ 7 ದೇವಿ ಶಕ್ತಿ ಪೀಠಗಳಲ್ಲಿ ಮೋದಿ ಹೆಸರಲ್ಲಿ ಪ್ರಾರ್ಥನೆ ಸಲ್ಲಿಕೆಯಾಗಿದೆ. ಸಿದ್ದಗಂಗಾ ಮಠ, ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪೂಜೆಯೊಂದಿಗೆ ನರೇಂದ್ರ ಮೋದಿ ಅವರ ಹೆಸರಲ್ಲಿ ಅನ್ನಸಂತರ್ಪಣೆ ಸೇವಾ ಕಾರ್ಯವೂ ನಡೆದಿದೆ.

ಇದನ್ನೂ ಓದಿ: ಮೋದಿ ಜನ್ಮದಿನದಂದು ವಿಶ್ವ ದಾಖಲೆ: ರಕ್ತದಾನ ಮಾಡಿದ 1 ಲಕ್ಷಕ್ಕೂ ಅಧಿಕ ಮಂದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.