ಬೆಂಗಳೂರು: ಲೋ ಶುಗರ್ನಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದ್ದಾರೆ.
ಮಧ್ಯಾಹ್ನ 1.40 ರ ಸುಮಾರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಎರಡರಿಂದ ಮೂರು ನಿಮಿಷಗಳ ಕಾಲ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಜೊತೆಗೆ ಮಾತುಕತೆ ನಡೆಸಿದರು. ಆದಷ್ಟು ಬೇಗ ಚೇತರಿಕೆ ಕಾಣುವಂತೆ ಹಾರೈಸಿದರು.
ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಆದಷ್ಟು ಬೇಗ ಕರ್ತವ್ಯಕ್ಕೆ ಮರಳಿ, ಸ್ವಲ್ಪ ವಿಶ್ರಾಂತಿ ಕೂಡ ಪಡೆಯುವಂತೆ ಕೇಂದ್ರ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.