ETV Bharat / state

ಬೆಂಗಳೂರಲ್ಲಿ ಇಂದು ಮೋದಿ ರೋಡ್​ ಶೋ: ಶಿವಮೊಗ್ಗ, ನಂಜನಗೂಡಲ್ಲೂ ಸಮಾವೇಶ

author img

By

Published : May 7, 2023, 7:24 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಕೊನೆಯ ದಿನದ ಚುನಾವಣಾ ಪ್ರಚಾರವಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿ, ಶಿವಮೊಗ್ಗ ಹಾಗೂ ನಂಜನಗೂಡಿನಲ್ಲಿ ಮತಯಾಚನೆ ನಡೆಸಲಿದ್ದಾರೆ.

PM Modi roadshow
ಕರ್ನಾಟಕ ರಾಜಕೀಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ 11:30ರವರೆಗೆ ಮತಯಾಚನೆ ಮಾಡಲಿದ್ದಾರೆ. ರೋಡ್ ಶೋ ನಡೆಯುವ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಪರ್ಯಾಯ ಮಾರ್ಗ ಬಳಸುವಂತೆ ಸಾರ್ವಜನಿಕರಿಗೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೊಸ ತಿಪ್ಪಸಂದ್ರ ರಸ್ತೆಯಲ್ಲಿರುವ ಕೆಂಪೇಗೌಡ ಪ್ರತಿಮೆಯಿಂದ ರೋಡ್ ಶೋ ಆರಂಭವಾಗಲಿದೆ. ಹೆಚ್.ಎ.ಎಲ್ 2ನೇ ಹಂತದ 80 ಅಡಿ ರಸ್ತೆ ಜಂಕ್ಷನ್, 12ನೇ ಮುಖ್ಯ ರಸ್ತೆ ಜಂಕ್ಷನ್, 100 ಅಡಿ ಜಂಕ್ಷನ್, ಇಂದಿರಾ ನಗರ, ಸುಬ್ರಮಣ್ಯಸ್ವಾಮಿ ದೇವಸ್ಥಾನದ ಮೂಲಕ ಎಂಜಿ ರಸ್ತೆಗೆ ತಲುಪಿ ಟ್ರಿನಿಟಿ ಸರ್ಕಲ್​ನಲ್ಲಿ ಕೊನೆಗೊಳ್ಳಲಿದೆ. ನಿನ್ನೆ (ಶನಿವಾರ) ಮೋದಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 26 ಕಿ.ಮೀ ರೋಡ್ ಶೋ ನಡೆಸಿದ್ದರು.

ಶಿವಮೊಗ್ಗದಲ್ಲಿ ಸಮಾವೇಶ: ಬೆಂಗಳೂರಿನ ಬಳಿಕ ಮೋದಿ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ. ಶಿವಮೊಗ್ಗ ತಾಲೂಕು ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಆವರಣದಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗುವರು. ಸುಮಾರು 100 ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ.

ಮಧ್ಯಾಹ್ನ 2:30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ 50 ನಿಮಿಷ ಭಾಷಣ ಮಾಡಲಿದ್ದಾರೆ. ಜಿಲ್ಲೆಯ 7 ಕ್ಷೇತ್ರ, ದಾವಣಗೆರೆಯ 2 ಕ್ಷೇತ್ರ ಹಾಗೂ ಚಿಕ್ಕಮಗಳೂರಿನ ಒಂದು ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಧಾನಿ ಪ್ರಚಾರ ನಡೆಸಲಿದ್ದಾರೆ. 10 ಕ್ಷೇತ್ರದ ಮತದಾರರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿ ಕ್ಷೇತ್ರದಿಂದ 30 ಸಾವಿರ ಜನರು ಸೇರಿದಂತೆ ಸುಮಾರು ಮೂರು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ವಾಹನಗಳನ್ನು ನಿಲ್ಲಿಸಲು ಆಯನೂರಿನ ಹೊರ ಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಎಲಚೆಗೆರೆ ಬೋರೆ ಗ್ರಾಮದಲ್ಲಿ ಬಹಿರಂಗ ಸಭೆ: ಇದಾದ ಬಳಿಕ ಮೋದಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚೆಗೆರೆ ಬೋರೆ ಗ್ರಾಮದಲ್ಲಿ ಬಹಿರಂಗ ಪ್ರಚಾರ ಸಮಾವೇಶ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂದಾಜು 1 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. 3 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ರ‍್ಯಾಲಿ ನಡೆಸಲಿದ್ದಾರೆ ಎಂದು ಕಾರ್ಯಕ್ರಮದ ಉಸ್ತುವಾರಿ ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಸಂಜೆ 4:35 ಕ್ಕೆ ವೇದಿಕೆಗೆ ಆಗಮಿಸುವ ನರೇಂದ್ರ ಮೋದಿ 5-25 ರವರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ: ವೇದಿಕೆ ಕಾರ್ಯಕ್ರಮ ಮುಗಿದ ನಂತರ ಸಂಜೆ 5:30ಕ್ಕೆ ಹೊರಟು 6-45 ರವರೆಗೆ ನಂಜನಗೂಡಿಗೆ ಆಗಮಿಸಿ ಗಣಪತಿ, ಸುಬ್ರಹ್ಮಣ್ಯ, ಆದಿ ನಾರಾಯಣ, ಪಾರ್ವತಿ ಅಮ್ಮನವರ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಶ್ರೀಕಂಠೇಶ್ವರನಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕರ್ನಾಟಕ ಪ್ರವಾಸ ಮುಗಿಸಿ ಪ್ರಧಾನಿ ರಾತ್ರಿ ನವದೆಹಲಿಗೆ ವಾಪಸ್​ ಆಗಲಿದ್ದಾರೆ.

ಇದನ್ನೂ ಓದಿ: ನಾಳೆಯೂ ಮೋದಿಯಿಂದ ರೋಡ್ ಶೋ: ವಾಹನ ಸವಾರರೇ ಈ ರಸ್ತೆಗಳಲ್ಲಿ ಸಂಚಾರ ಇರುವುದಿಲ್ಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.