ETV Bharat / state

ಫೆ. 6ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರು, ತುಮಕೂರಿನ ಕಾರ್ಯಕ್ರಮದಲ್ಲಿ ಭಾಗಿ..! - ಅಮಿತ್ ಶಾ ಜೋಡಿ ಸರಣಿ ಪ್ರವಾಸ

ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣು - ಮೋದಿ, ಶಾ ಸರಣಿ ಕಾರ್ಯಕ್ರಮದಲ್ಲಿ ಭಾಗಿ - ಒಂದೇ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಮೋದಿ

ಫೆ. 6ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರು, ತುಮಕೂರಿನ ಕಾರ್ಯಕ್ರಮದಲ್ಲಿ ಭಾಗಿ..!
pm-modi-series-visit-to-karnataka-due-to-assembly-election
author img

By

Published : Jan 30, 2023, 5:38 PM IST

ಬೆಂಗಳೂರು: ಮೇ ತಿಂಗಳಿನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ರಂಗಪ್ರವೇಶ ಮಾಡಿದ್ದು ಮೋದಿ, ಅಮಿತ್ ಶಾ ಜೋಡಿ ಸರಣಿ ಪ್ರವಾಸದ ಮೂಲಕ ರಾಜ್ಯ ಬಿಜೆಪಿಗೆ ಬೂಸ್ಟ್ ನೀಡಲು ಮುಂದಾಗಿದ್ದಾರೆ. ಅಮಿತ್ ಶಾ ಬೆನ್ನಲ್ಲೇ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲು ಸಜ್ಜಾಗಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಮೂರು ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲ್ಲೇ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಬಾರಿ ಪ್ರವಾಸದ ವೇಳೆ ಕಲ್ಯಾಣ ಕರ್ನಾಟಕದ ಮೇಲೆ ಕಣ್ಣಿಟ್ಟಿದ್ದ ಮೋದಿ ಇದೀಗ ಹಳೇ ಮೈಸೂರು ಭಾಗದ ಮೇಲೆ ಫೋಕಸ್ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಬ್ಯಾಕ್ ಟು ಬ್ಯಾಕ್ ಎಂಟ್ರಿಗೆ ಬಿಜೆಪಿ ಕಾರ್ಯಕರ್ತರು ಫುಲ್ ಖುಷ್ ಆಗಿದ್ದಾರೆ.

ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಮೋದಿ: ಫೆ.6 ರಂದು ಬೆಳಗ್ಗೆ 8:20ಕ್ಕೆ ದೆಹಲಿಯಿಂದ ವಾಯುಪಡೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿರುವ ಮೋದಿ, 10:55 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ತೆರಳಲಿದ್ದಾರೆ. 11:25ಕ್ಕೆ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮ ಉದ್ಘಾಟನೆ ಮಾಡಿಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 2:45 ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ತುಮಕೂರು ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದಾರೆ.

ಅಂದು ಸಂಜೆ 3.30 ರಿಂದ 4:30ಕ್ಕೆ ತುಮಕೂರಿನಲ್ಲಿ ಹೆಚ್.ಎ.ಎಲ್ ಹೆಲಿಕ್ಯಾಪ್ಟರ್ ತಯಾರಿಕ ಘಟಕ ಉದ್ಘಾಟನೆ ಮಾಡಲಿರುವ ಮೋದಿ, ನಂತರ ಜಲಜೀವನ್ ಮಿಷನ್ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದು, ಸಂಜೆ 4:40ಕ್ಕೆ ತುಮಕೂರು ಹೆಲಿಪ್ಯಾಡ್ ನಿಂದ ಬೆಂಗಳೂರು ಏರ್ಪೋರ್ಟ್ ನತ್ತ ಪ್ರಯಾಣಿಸಲಿದ್ದಾರೆ. ಸಂಜೆ 5:20ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ.

ಫೆ.6 ರಂದು ಒಂದು ದಿನದ ಕಾರ್ಯಕ್ರಮದ ನಂತರ ಫೆಬ್ರವರಿ 13 ಕ್ಕೆ ಮತ್ತೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಯಲಹಂಕ ವಾಯುನೆಲಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ಬು ಉದ್ಘಾಟನೆ ಮಾಡಲಿದ್ದಾರೆ. ಅಂದು ಪಕ್ಷದ ಕಾರ್ಯಕ್ರಮಕ್ಕೂ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ, ಅದರ ನಂತರ ಮತ್ತೆ ಫೆಬ್ರವರಿ 27 ರಂದು ಪ್ರಧಾನಿ ಮೋದಿ ಮತ್ತೆ ಆಗಮಿಸಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದು, ಯಡಿಯೂರಪ್ಪ ಹುಟ್ಟುಹಬ್ಬದ ಕೊಡುಗೆಯಾಗಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಮೂರು ಬಾರಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಮಿತ್ ಶಾ ಪ್ರವಾಸಕ್ಕೂ ಸಮಯ ನಿಗದಿಪಡಿಸಲಾಗುತ್ತಿದೆ. ಇವರ ಜೊತೆ ಜೆಪಿ ನಡ್ಡಾ, ರಾಜನಾಥಸಿಂಗ್ ಸೇರಿ ಹಲವು ನಾಯಕರೂ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ವೈಯಕ್ತಿಕವಾಗಿ ಹಗುರವಾಗಿ ಮಾತಾಡುವ ಹೊಲಸು ಚಟವಿದೆ : ಚನ್ನರಾಜ್ ಹಟ್ಟಿಹೊಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.