ಬೆಂಗಳೂರು/ನವದೆಹಲಿ : ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಮಾಹಿತಿ ಪಡೆದರು.
ಸಿಎಂ ಬಿಎಸ್ವೈ ಜೊತೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ, ರಾಜ್ಯದ ಕೊರೊನಾ ಸೋಂಕಿನ ಪ್ರಮಾಣ, ಬೆಡ್ ವ್ಯವಸ್ಥೆ, ಆಕ್ಸಿಜನ್ ಲಭ್ಯತೆ, ಲಸಿಕೆ ನೀಡುವುದು ಹಾಗೂ ಸೋಂಕಿನ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಪಡೆದರು. ಜೊತೆಗೆ ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯಮಂತ್ರಿಗಳಿಂದಲೂ ಪ್ರಧಾನಿ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕೂಡ 5 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮಾತನಾಡಿದ್ದರು.
ಓದಿ : ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಇದುವರೆಗೆ ಇದ್ದ ಜನತಾ ಕರ್ಫ್ಯೂನಿಂದ ಯಾವುದೇ ಪರಿಣಾಮ ಕಂಡುಬಂದಿಲ್ಲ. ಈ ಹಿನ್ನೆಲೆ ನಾಳೆಯಿಂದ ಲಾಕ್ಡೌನ್ ಜಾರಿಗೊಳಿಸಲಾಗಿದೆ.