ETV Bharat / state

ಪ್ರಧಾನಿ ಮೋದಿ ಭೇಟಿ.. ಭದ್ರತೆಗಾಗಿ 6 ಸಾವಿರ ಪೊಲೀಸರ ನಿಯೋಜನೆ: ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ - Bengaluru City Police Commissioner Pratap Reddy

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗದಿರಲಿ ಎಂಬ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಹೆಲಿಪ್ಯಾಡ್ ಬಳಸುತ್ತಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದರು.

pm-modi-visit-six-thousand-policemen-deployed-for-security-in-bengaluru
ಪ್ರಧಾನಿ ಮೋದಿ ಭೇಟಿ... ಭದ್ರತೆಗಾಗಿ 6 ಸಾವಿರ ಪೊಲೀಸರ ನಿಯೋಜನೆ: ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ
author img

By

Published : Nov 9, 2022, 9:50 PM IST

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ರನ್ ವೇ ಉದ್ಘಾಟನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದು, ಭದ್ರತೆ ದೃಷ್ಟಿಯಿಂದ ಸುಮಾರು 6 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ‌ ಎಂದು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ತಿಳಿಸಿದರು.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಹೆಚ್​ಎಎಲ್ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ, ವಿಧಾನಸೌಧ ಮುಂಭಾಗದ ಕನಕದಾಸ ಪುತ್ಥಳಿ ಅನಾವರಣ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಮಾತರಂ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ ಬೆಂಗಳೂರು ಏರ್ ಪೋರ್ಟ್​ನಲ್ಲಿ ಎರಡನೇ ರನ್ ವೇ ಉದ್ಘಾಟನೆ ಹಾಗೂ 108 ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸುವರು ಎಂದರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಒಟ್ಟು ಆರು ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ನಗರ ಕೇಂದ್ರ ವಿಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಲಿದ್ದು, ಪರ್ಯಾಯ ಮಾರ್ಗಗಳತ್ತ ರೂಪುರೇಷೆ‌ ಸಿದ್ದಪಡಿಸಲಾಗುತ್ತಿದೆ. ಟ್ರಾಫಿಕ್ ಜಾಮ್ ಉಂಟಾಗದಿರಲಿ ಎಂಬ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಹೆಲಿಪ್ಯಾಡ್ ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಜಗತ್ತಿನ ಎತ್ತರದ ಕಂಚಿನ ಪ್ರತಿಮೆ.. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಿಂದ ಪ್ರಮಾಣಪತ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.