ETV Bharat / state

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ನ.11 ರಂದು ಮೋದಿ ಚಾಲನೆ: ಸಿಎಂ ಬೊಮ್ಮಾಯಿ

author img

By

Published : Oct 27, 2022, 3:06 PM IST

Updated : Oct 27, 2022, 5:49 PM IST

ಸಿಎಂ ಬೊಮ್ಮಾಯಿ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರನ್ಸ್. ಬೆಂಗಳೂರ ಕಾರ್ಯಕ್ರಮಗಳ ಕುರಿತು ವಿವರ ಪಡೆದ ಪ್ರಧಾನಿ ಮೋದಿ. ನವೆಂಬರ್ 11 ರಂದು ಪ್ರಧಾನಿ ಅವರು ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.

ಸಿಎಂ ಬೊಮ್ಮಾಯಿ ಜೊತೆಗೆ ಮೋದಿ ವಿಡಿಯೋ ಕಾನ್ಫರನ್ಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು. ಪ್ರಧಾನಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಮಾಹಿತಿಯನ್ನು ಪಡೆದರು. ಜೊತೆಗೆ ತಮ್ಮ ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅಡಚಣೆಯಾಗದಂತೆ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು.

ವಂದೇ ಭಾರತ ಎಕ್ಸ್​ಪ್ರೆಸ್​ಗೆ ಚಾಲನೆ: ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನವೆಂಬರ್ 11 ರಂದು ಪ್ರಧಾನಿ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಚೆನ್ನೈ- ಮೈಸೂರು ನಡುವೆ ದಕ್ಷಿಣ ಭಾರತದ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ

(ಓದಿ: ಅಜಾದಿ ಕಾ ಅಮೃತ ಮಹೋತ್ಸವ: ಈನಾಡು ಸಂಸ್ಥೆಯ ಪ್ರಯತ್ನಕ್ಕೆ ಭೇಷ್​​​ ಎಂದ ಪ್ರಧಾನಿ)

ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಿ ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ. ನಟ ರಜನಿಕಾಂತ್ ಅವರನ್ನು ಸಂಪರ್ಕಿಸುವ ಪ್ರಯತ್ನವೂ ನಡೆದಿದೆ ಎಂದು ತಿಳಿಸಿದರು.

ಬಂಡೆಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿದ್ದು, ತನಿಖೆಯ ನಂತರ ಎಲ್ಲ ಸತ್ಯಗಳೂ ಹೊರಬೀಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯ ಅಧಿಕಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Last Updated : Oct 27, 2022, 5:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.