ಬೆಂಗಳೂರು: ನವೆಂಬರ್ 10ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮೋದಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಬೆಂಗಳೂರಿನ ಕೆಲ ಶಾಸಕರು ಪಾಲ್ಗೊಂಡಿದ್ದರು. ನವೆಂಬರ್ 10ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಸಭೆಯಲ್ಲಿ ಮೋದಿ ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕೆ 2 ಲಕ್ಷ ಜನರನ್ನು ಸೇರಿಸಲು ನಿರ್ಧರಿಸಲಾಗಿದೆ. ಬೆಂಗಳೂರು ನಗರದಿಂದ 1 ಲಕ್ಷ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 50 ಸಾವಿರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಿಂದ ತಲಾ 25 ಸಾವಿರ ಜನ ಸೇರಿಸಲು ನಿರ್ಧರಿಸಲಾಗಿದೆ. ಮುಂದಿನ ವಾರ ಈ ಸಂಬಂಧ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಓದಿ: 'ನಾಗೇಶ್ ನೀನ್ ಮಾತನಾಡೋದಿದ್ರೆ ಹೊರಗೆ ಕರೆದುಕೊಂಡು ಹೋಗಿ ಮಾತನಾಡು'.. ಶಿಕ್ಷಣ ಸಚಿವರ ಮೇಲೆ ಸಿಎಂ ಗರಂ