ETV Bharat / state

ನಾಳೆ ದಕ್ಷಿಣ ಭಾರತ ರಾಜ್ಯಗಳ ಸಿಎಂಗಳ ಜತೆ ಪಿಎಂ ವಿಡಿಯೋ ಸಂವಾದ: CM BSY ಭಾಗಿ - ಪ್ರಧಾನಿ ಮೋದಿ

ಪ್ರಸ್ತುತ ಕೋವಿಡ್ ಸ್ಥಿತಿಗತಿ ಕುರಿತಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆರು ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ
author img

By

Published : Jul 15, 2021, 10:02 AM IST

ಬೆಂಗಳೂರು: ದಕ್ಷಿಣ ಭಾರತದ 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಾಳೆ‌ ವಿಡಿಯೋ ಸಂವಾದ ನಡೆಸಲಿದ್ದಾರೆ. ಕೋವಿಡ್ ಎರಡನೇ ಅಲೆ ನಿಯಂತ್ರಣದ ಸ್ಥಿತಿಗತಿ ಹಾಗೂ ಮೂರನೇ ಅಲೆ ತಡೆಗೆ ಕೈಗೊಳ್ಳುತ್ತಿರುವ ಸಿದ್ಧತೆಗಳ ವಿವರವನ್ನು ಪ್ರಧಾನಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ನೀಡಲಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ , ಕೇರಳ ಮತ್ತು ಒಡಿಶಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಮೂರನೇ ಅಲೆ ಮುನ್ಸೂಚನೆ ಹಿನ್ನೆಲೆ ಎಲ್ಲ ರಾಜ್ಯಗಳ ಸಿಎಂ ಜೊತೆ ಕೋವಿಡ್ ಸ್ಥಿತಿಗತಿಯ ಬಗ್ಗೆ ಮೋದಿ ಮಾಹಿತಿ ಪಡೆದುಕೊಳ್ಳುತ್ತಿದ್ದು, ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದಾರೆ. ಹಾಗಾಗಿ ಈಶಾನ್ಯ ರಾಜ್ಯಗಳ ಸಭೆ ನಂತರ ದಕ್ಷಿಣ ರಾಜ್ಯಗಳ ಸಭೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣ, ಅನ್​ಲಾಕ್ ನಂತರದಲ್ಲಿ ಕೋವಿಡ್ ಪಾಸಿಟಿವಿಟಿ ದರ, ಸದ್ಯ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದರೂ, ಮೂರನೇ ಅಲೆ ಏಕಾಏಕಿ ಎದುರಾದರೆ ಪರಿಸ್ಥಿತಿ ಎದುರಿಸಲು ಮಾಡಿಕೊಳ್ಳುತ್ತಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಯಡಿಯೂರಪ್ಪ ವಿವರ ನೀಡಲಿದ್ದಾರೆ. ಲಸಿಕಾ ಅಭಿಯಾನಕ್ಕೆ ವೇಗ ನೀಡುವುದೊಂದೇ ಪರಿಹಾರ ಎನ್ನುವ ಕಾರಣಕ್ಕೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಸಿಎಂ ಮನವಿ ಮಾಡಲಿದ್ದಾರೆ.

ಅನ್​ಲಾಕ್ 4.O ಚರ್ಚೆ?

ರಾಜ್ಯದಲ್ಲಿ ಅನ್​ಲಾಕ್ 3.O ಜಾರಿಯಲ್ಲಿದ್ದು, ನೈಟ್ ಕರ್ಫ್ಯೂ, ಸಿನಿಮಾ ಮಂದಿರ, ಈಜುಕೊಳ, ಪಬ್​ಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಇದರಲ್ಲಿ ಸಿನಿಮಾ ಮಂದಿರಕ್ಕೆ ಅವಕಾಶ ನೀಡುವ, ನೈಟ್ ಕರ್ಫ್ಯೂಗೆ ಮತ್ತಷ್ಟು ವಿನಾಯಿತಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗಿದೆ.

ಗಡಿಯಲ್ಲಿ ಕಟ್ಟೆಚ್ಚರ

ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದರೂ ನೆರೆಯ ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೋಂಕು ಹೆಚ್ಚಿದ್ದು, ರಾಜ್ಯಕ್ಕೆ ಆತಂಕ ತರಿಸಿದೆ. ಹೀಗಾಗಿ ಗಡಿಗಳಲ್ಲಿ ಹೆಚ್ಚಿನ ಕಟ್ಟೆಚ್ಚರಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದನ್ನೂ ಓದಿ:ಅಕ್ರಮ ಗಣಿಗಾರಿಕೆ ವಿರುದ್ಧ ಸಮರ - ಮನ್ಮುಲ್ ಹಗರಣ ವಿರುದ್ಧದ ಹೋರಾಟಕ್ಕೂ ಸಂಸದೆ ಸುಮಲತಾ ಸಾಥ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.