ETV Bharat / state

ಸೋಷಿಯಲ್ ಮೀಡಿಯಾ ಮೇಲೆ ಕಣ್ಣಿಡಲು ಪ್ರತಿ ಠಾಣಾ ವ್ಯಾಪ್ತಿಯಲ್ಲಿ ನುರಿತ ಸಿಬ್ಬಂದಿ ನಿಯೋಜನೆ!

author img

By ETV Bharat Karnataka Team

Published : Aug 26, 2023, 1:35 PM IST

ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಬೆಂಗಳೂರು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

Police b dayanand
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿವೆ. ಗಲಭೆಗಳು ಸಂಭವಿಸುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ವಿನೂತನ ಪ್ರಯೋಗ ಆರಂಭಿಸಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಇಬ್ಬರು ಸಿಬ್ಬಂದಿ ಒಳಗೊಂಡು ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯ ನಿರ್ವಹಿಸಲಿದ್ದು, ನಗರದಾದ್ಯಂತ ಎಲ್ಲಾ ಠಾಣೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಆ ಮೂಲಕ ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಸಾಮಾಜಿಕ ಜಾಲತಾಣದ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಡಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್, ಕಮೆಂಟ್ಸ್, ಅಶಾಂತಿಯನ್ನುಂಟು ಮಾಡುವಂತಹ ಪ್ರಕರಣಗಳ ಬಗ್ಗೆ ಪೊಲೀಸ್​ ತಂಡ ಹೆಚ್ಚಿನ ನಿಗಾ ವಹಿಸಲಿದೆ.

ಬಿ. ದಯಾನಂದ್ ಮಾಹಿತಿ: ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, "ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಗೆ ವಿವಿಧ ರೀತಿಯಲ್ಲಿ ಉತ್ತೇಜನ ಆಗುವಂತಹ ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತಿರುವುದು ತಿಳಿದು ಬಂದ ಹಿನ್ನೆಲೆ, ಪ್ರತಿ ಡಿಸಿಪಿಗಳ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಮಾನಿಟರ್ ಮಾಡಲು ತಂಡ ರಚನೆ ಮಾಡಲಾಗಿದೆ. ಪೊಲೀಸ್ ಕಮೀಷನರ್ ಕಚೇರಿಯಲ್ಲೂ ಪರಿಣಿತರ ದೊಡ್ಡ ತಂಡವನ್ನ ರಚನೆ ಮಾಡಲಾಗಿದೆ.

ಸುಳ್ಳು ಸುದ್ದಿಗಳು, ಫೇಕ್​ ಪೋಸ್ಟ್ ವೈರಲ್ ಆಗುತ್ತಿದ್ದಲ್ಲಿ ಅದರ ನಿಜಾಂಶವನ್ನ ಜನರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇವೆ. ಮತ್ತು ಆಧುನಿಕ ತಂತ್ರಜ್ಞಾನವನ್ನ ಬಳಸಿಕೊಂಡು ತಪ್ಪಿತಸ್ಥರನ್ನು ಪತ್ತೆಹಚ್ಚಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕ್ರಮ: ತಾಂತ್ರಿಕ ಪರಿಣಿತಿ ಇರುವ ಸಿಬ್ಬಂದಿಯನ್ನು ಈ ಕೆಲಸಕ್ಕೆ ನೇಮಕ ಮಾಡಲಾಗಿದ್ದು, ವಿಶೇಷ ತರಬೇತಿ ಕೊಡಲಾಗಿದೆ. ನಕಲಿ ಖಾತೆಗಳನ್ನೂ ಪತ್ತೆ ಹಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆ. 23 ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ... ವಿಕ್ರಮ ಇಳಿದ ತಾಣವನ್ನ’ಶಿವಶಕ್ತಿ’ ಪಾಯಿಂಟ್ ಎಂದು ಕರೆದ ಮೋದಿ!

ಫ್ಯಾಕ್ಟ್​ ಚೆಕ್​ ಘಟಕ: ಫೇಕ್ ನ್ಯೂಸ್​ ವೈರಲ್​ ಆಗಿ ಸಮಸ್ಯೆ ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದೊಂದಿಗೆ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫ್ಯಾಕ್ಟ್​ ಚೆಕ್​ ಘಟಕ ನಿರ್ಮಾಣಕ್ಕೆ ಗ್ರೀನ್​ ಸಿಗ್ನಲ್​ ಕೂಡ ಕೊಟ್ಟಿದ್ದಾರೆ. ನಗರ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದರೂ ಕೂಡ ಫ್ಯಾಕ್ಟ್​ ಚೆಕ್​ ಘಟಕ ಅಗತ್ಯವಿದೆ. ಶಾಂತಿ . ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಪೊಲೀಸರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ.. ಚೆನ್ನೈನಲ್ಲಿ ವೈದ್ಯಕೀಯ ವಿದ್ಯಾರ್ಥಿ ಬಂಧಿಸಿದ ಬೆಂಗಳೂರು ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.