ಬೆಂಗಳೂರು : ಮನೆಗೆಲಸ ಮಾಡುತ್ತಿದ್ದ ಮಾಲೀಕರ ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀ ಬಂಧಿತ ಮಹಿಳೆ.
ಚಿತ್ತೂರು ಮೂಲದ ಈಕೆ ಯಲಹಂಕ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ಕೋಗಿಲು ರಸ್ತೆಯ ಬಿಗ್ರೇಡ್ ಅಪಾರ್ಟ್ಮೆಂಟ್ನಲ್ಲಿರುವ ನಾಲ್ಕು ಪ್ಲ್ಯಾಟ್ಗಳಲ್ಲಿ ಮನೆಗೆಲಸ ಮಾಡುತ್ತಿದ್ದಳು. ಕೆಲ ತಿಂಗಳ ಹಿಂದೆ ಮಾಲೀಕರ ಕಣ್ಣು ತಪ್ಪಿಸಿ ಮನೆಯಲ್ಲಿದ್ದ ಚಿನ್ನಾಭರಣ ಎಗರಿಸುತ್ತಿದ್ದಳಂತೆ. ಈ ಬಗ್ಗೆ ಅನುಮಾನಗೊಂಡ ಮಾಲೀಕರು ಲಕ್ಷ್ಮೀ ವಿರುದ್ಧ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿ ಲಕ್ಷ್ಮೀಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವ ಗೊತ್ತಾಗಿದೆ. ಸದ್ಯ ಮಹಿಳೆಯಿಂದ 12 ಲಕ್ಷ ಮೌಲ್ಯದ 310 ಗ್ರಾಂ ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.