ಬೆಂಗಳೂರು: ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಉತ್ತರ ವಿಭಾಗದ ಪೊಲೀಸ್ ಠಾಣೆಯ CEN ಪೊಲೀಸರು 14 ಜನ ವಿದ್ಯಾರ್ಥಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್, ಬಂಗಾರ ಪೇಟೆ, ಕೆಜಿಎಫ್ ಭಾಗದ ಅಕ್ಷಯ ಇಂಟರ್ ನ್ಯಾಷನಲ್ ಸ್ಕೂಲ್, ನವಚೇತನ ಸ್ಕೂಲ್ ಸೇರಿದಂತೆ ಕೋಲಾರ ಹಾಗೂ ಬಂಗಾರಪೇಟೆ ಭಾಗದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದೇವೆ. ಜೆ.ಜೆ.ಆ್ಯ ಕ್ಟ್ನ ಅಡಿಯಲ್ಲಿ ಪ್ರಕರಣ ವಿಚಾರಣೆ ನಡೆಸುತ್ತೇವೆ. ಸದ್ಯ ಹಲೋ ಆ್ಯಪ್ನ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ ಎಂದರು.