ETV Bharat / state

ಬೆಂಗಳೂರು ಗಲಭೆ ಪ್ರಕರಣ: ತಡರಾತ್ರಿ ಮತ್ತೆ 30 ಮಂದಿಯ ಬಂಧನ - Akhanda Srinivasa Murthy

ಗಲಭೆ ಪ್ರಕರಣದಲ್ಲಿ ಇನ್ನಷ್ಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ 30 ಮಂದಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Riot case: Police arrested 30 more people late at night
ಗಲಭೆ ಪ್ರಕರಣ: ತಡರಾತ್ರಿ ಮತ್ತೆ 30 ಮಂದಿಯನ್ನು ಬಂಧಿಸಿದ ಪೊಲೀಸರು
author img

By

Published : Aug 21, 2020, 11:16 AM IST

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆಗೆ ಸಂಬಂಧಿಸದಂತೆ ತಡರಾತ್ರಿ ಮತ್ತೆ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದವರ ಮನೆ ಮೇಲೆ ದಾಳಿ ನಡೆಸಿ 30 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಶಾಸಕರ ಮನೆಗೆ ಬೆಂಕಿ ಹಚ್ಚಿರುವ ಪ್ರಮುಖ ಘಟನೆಯಲ್ಲಿ ಕೆಲವರು ಭಾಗಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಮತ್ತೊಂದೆಡೆ ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸುವ ವೇಳೆ ಆರೋಪಿಗಳ ಪೋಷಕರು ನಮ್ಮ ಮಕ್ಕಳು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟುಬಿಡಿ ಎಂದು ಠಾಣೆ ಎದುರು ಗೋಗರೆಯುತ್ತಿದ್ದದ್ದು ಕಂಡು ಬಂತು. ಬಳಿಕ ಪೊಲೀಸರು ಅವರನ್ನು ಮರಳಿ ಮನೆಗೆ ಕಳುಹಿಸಿದ್ದಾರೆ. ಸದ್ಯ ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.