ಬೆಂಗಳೂರು: ಟ್ರಾವೆಲ್ಸ್ ಏಜೆನ್ಸಿ ಇಟ್ಟುಕೊಂಡು ಕಾರುಗಳ ಮೂಲಕ ಗಾಂಜಾ ಸರಬರಾಜು ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಟ್ರಾವೆಲ್ಸ್ ಏಜೆನ್ಸಿ ಮಾಲೀಕನನ್ನು ಎಸ್.ಜೆ.ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಈತ ಬೆಂಗಳೂರು ಟ್ರಾನ್ಸ್ ಪೋರ್ಟ್ ಸಲ್ಯೂಷನ್ ಹೆಸರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ. 25 ಕಾರುಗಳಿಗೆ ಮಾಲೀಕನಾಗಿದ್ದ ಪ್ರದೀಪ್, ಕಳೆದ ಐದು ವರ್ಷಗಳಿಂದ ತಮ್ಮ ಏಜೆನ್ಸಿ ಕಾರಿನಲ್ಲಿಯೇ ಗಾಂಜಾ ಸರಬರಾಜು ಮಾಡುತ್ತಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಓದಿ: ಹೈದರಾಬಾದ್‌ನಿಂದ ಮಂಗಳೂರಿಗೆ ಗಾಂಜಾ ಸಾಗಾಟ : ಇಬ್ಬರ ಬಂಧನ
ಈತ ಕೋಲಾರದ ವಾಸಿ ಸಲೀಂ ಎಂಬಾತನಿಂದ ಖರೀದಿಸಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 30 ಲಕ್ಷ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸಲೀಂ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.