ಬೆಂಗಳೂರು: ಹಿಜಾಬ್ ವಿವಾದ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ರಾಜ್ಯ ಆಂತರಿಕ ಭದ್ರತಾ ಘಟಕ (ಐಎಸ್ಡಿ) ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ ಬೆನ್ನಲೇ ವಿದ್ಯಾರ್ಥಿಗಳಿಂದ ಆಕ್ಷೇಪ ಕೇಳಿ ಬಂದಿದೆ.
ರಾಜ್ಯದಲ್ಲಿ ಹಿಜಬ್- ಕೇಸರಿ ವಿವಾದ ಬಿಸಿಯಾಗಿರುವಾಗಲೇ ರಾಜ್ಯದ ಶೈಕ್ಷಣಿಕ ಸಂಸ್ಥೆಗಳ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದಕ್ಕೆ ಜಮ್ಮು ಮತ್ತು ಕಾಶ್ಮೀರಿ ಸ್ಟೂಡೆಂಟ್ ಅಸೋಸಿಯೇಷನ್ ಅಸಮಾಧಾನ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಲಿ : ಪ್ರಲ್ಹಾದ್ ಜೋಶಿ ಸವಾಲು
ಇದರ ಬೆನ್ನಲೇ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕಾಶ್ಮೀರ ವಿದ್ಯಾರ್ಥಿಗಳನ್ನ ಪ್ರತ್ಯೇಕವಾಗಿ ಕಾಣುತ್ತಿಲ್ಲ. ಭೌಗೋಳಿಕ ಹಿನ್ನೆಲೆಯನ್ನ ಲೆಕ್ಕಿಸದೇ ಪೊಲೀಸರು ವಿದ್ಯಾರ್ಥಿಗಳ ಭದ್ರತೆ ಒದಗಿಸುತ್ತಿದ್ದಾರೆ. ಕಾಶ್ಮೀರಿ ವಿದ್ಯಾರ್ಥಿಗಳ ಭದ್ರತೆಗೆ ನಾವು ಬದ್ಧವಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದು, ಇದಕ್ಕೆ ಡಿಜಿ ಪ್ರವೀಣ್ ಸೂದ್ ಸಹ ಅನುಮೋದಿಸಿದ್ದಾರೆ.