ಬೆಂಗಳೂರು: ಕ್ವಾರಂಟೈನ್ ಮುಗಿಸಿ ಕರ್ತವ್ಯಕ್ಕೆ ಹಾಜರಾದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ಕ್ರಮಗಳು, ಹೆಚ್ಚುತ್ತಿರುವ ಮಳೆ ಹಾಗೂ ಕೊರೊನಾಗೆ ಸೇರಿದಂತೆ ಹಲವು ವಿಚಾರಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಕಮಲ್ ಪಂತ್ ಜೊತೆ ಸಭೆ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ.
ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಂ ಕ್ವಾರಂಟೈನ್ ಅವಧಿ ಇಂದು ಮುಕ್ತಾಯವಾಗಿದೆ. ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಹಾಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದೇನೆ ಎಂದರು.