ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಎಸ್ಐಟಿ ಮುಖ್ಯಸ್ಥ ದೀರ್ಘ ರಜೆ ಹಿನ್ನೆಲೆ ಖುದ್ದು ಆಯುಕ್ತರಿಂದಲೇ ಮೀಟಿಂಗ್ ನಡೆಸುತ್ತಿದ್ದು, ಎಸ್ಐಟಿ ರದ್ದು ಮಾಡಲು ಹೈಕೋರ್ಟ್ಗೆ ಯುವತಿ ಅರ್ಜಿ ಸಂಬಂಧ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ನಿಟ್ಟಿನಲ್ಲಿ ಇದುವರೆಗಿನ ತನಿಖಾ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದು ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಬೇಕಿದೆ. ಶಂಕಿತ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ಗೆ ಜಾಮೀನು ದೊರೆತಿದ್ದು, ಆದೇಶ ಪ್ರತಿ ಸಿಕ್ಕ ಐದು ದಿನದೊಳಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾನೂನುಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಅನುಚೇತ್, ಎಸಿಪಿ ಧರ್ಮೇಂದ್ರ, ಎಸಿಪಿ ಕವಿತಾ ಭಾಗಿಯಾಗಿದ್ದಾರೆ.