ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ನಿಖರ ಕಾರಣ ಕೋರಿ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ ((IISC) ಪತ್ರ ಬರೆಯಲು ಪೊಲೀಸ್ ಇಲಾಖೆ ಮುಂದಾಗಿದೆ.
ವಿದ್ಯುತ್ ಪರಿವರ್ತಕ ಸ್ಫೋಟಕ್ಕೆ ನಿಖರ ಕಾರಣವೇನು, ಸ್ಫೋಟದ ತೀವ್ರತೆ, ಇನ್ನಿತರ ಕಾರಣಗಳ ಅಧ್ಯಯನ ಮಾಡಿ ವರದಿ ನೀಡಲು ಐಎಎಸ್ಸಿ ಅಧಿಕಾರಿಗಳಿಗೆ ಪತ್ರ ಬರೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಮತ್ತೊಂದೆಡೆ ಸ್ಫೋಟಕ್ಕೆ ನಿಖರ ಕಾರಣ ಕೇಳಿ ಜಾರಿ ಮಾಡಿದ್ದ ಎರಡು ನೋಟಿಸ್ಗಳಿಗೂ ಬೆಸ್ಕಾಂ ಹಿರಿಯ ಆಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ.
ದುರಂತ ಸಂಬಂಧ ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಬೆಂಗಳೂರು ಟ್ರಾನ್ಸ್ಫಾರ್ಮರ್ ಸ್ಫೋಟ ಪ್ರಕರಣ: ಇಬ್ಬರು ಬೆಸ್ಕಾಂ ಇಂಜಿನಿಯರ್ಸ್ ಬಂಧನ