ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್ ಭೈರ್ಸಂದ್ರ ಮನೆ, ಕಚೇರಿ ಮೇಲೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಉದ್ರಿಕ್ತರನ್ನ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ.
ಗಲಾಟೆ ನಿಯಂತ್ರಣ ಮಾಡಲು ಈಶಾನ್ಯ ವಿಭಾಗದ ಡಿಸಿಪಿ ಭಿಮಾಶಂಕರ್ ಗುಳೇದ್ ಸ್ಥಳಕ್ಕಾಗಿಮಿಸಿದ್ದು, ಕಿಡಿಗೇಡಿಗಳು ಅವರ ಕಾರು ಜಖಂಗೊಳಿಸಿದ್ದಾರೆ. ಪೊಲೀಸ್ ಜೀಪು, ಕೆಎಸ್ಆರ್ಪಿ ವಾಹನ ಸೇರಿದಂತೆ ವಿವಿಧ ವಾಹನಗಳ ಮೇಲೆ ಉದ್ರಿಕ್ತು ಬೆಂಕಿ ಹಚ್ಚಿದ್ದಾರೆ.
ಪೊಲೀಸರು ಹಾಗೂ ಸಿಆರ್ಪಿಎಫ್ ಸಿಬ್ಬಂದಿ 200 ಸುತ್ತು ಗುಂಡು ಹಾರಿಸಿದ್ದು, ಈಗಾಗಲೇ ಗೃಹ ಸಚಿವರು ಪೊಲೀಸರು ಮುಕ್ತ ಅವಕಾಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪೊಲೀಸರ ಗುಂಡೇಟಿಗೆ ಓರ್ವ ಬಲಿಯಾಗಿದ್ದಾಗಿ ತಿಳಿದು ಬಂದಿದೆ. ಹಲವರಿಗೆ ಗುಂಡು ತಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಸಿಬಿ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ.
ಘಟನೆಯ ಮಾಹಿತಿ ಪಡೆದುಕೊಳ್ಳಲು ಗೃಹ ಸಚವ ಬಸವಾರಜ್ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋನ್ ಕಾಲ್ ಮಾಡಿದ್ದಾಗಿ ತಿಳಿದು ಬಂದಿದೆ.