ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿ ಸಂಜಯ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಕಾರ್ಯ ಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಪ್ರಕರಣದ ಆರೋಪಿಗಳು ಎನ್ನಲಾದ ಪೀಟರ್, ಸೂರ್ಯರನ್ನು ಪೊಲೀಸರು ಬಂಧಿಸಿದ್ಧಾರೆ. ಅರೆಸ್ಟ್ ಮಾಡುವ ಸಮಯದಲ್ಲಿ ಪೊಲೀಸರ ಮೇಲೆ ಪೀಟರ್ ಮತ್ತು ಸೂರ್ಯ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಗಾಯಗೊಂಡಿದ್ಧಾರೆ.
ತಮ್ಮ ಮೇಲೆ ದಾಳಿ ನಡೆದ ಕಾರಣ ಅತ್ಮರಕ್ಷಣೆಗಾಗಿ ಉಪ್ಪಾರಪೇಟೆ ಇನ್ಸ್ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ಸ್ಪೆಕ್ಟರ್ ಚಿದಾನಂದ್ ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಆರೋಪಿಗಳ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.