ಬೆಂಗಳೂರು: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಪೊಲೀಸ್ ಕ್ವಾರ್ಟರ್ಸ್ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬುವರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್. ಕೌಟುಂಬಿಕ ಕಲಹವೇ ಆತ್ಮಹತ್ಯೆ ಕಾರಣ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.