ETV Bharat / state

ತಣ್ಣಗಾಗದ ಈದ್ಗಾ ಕಿಚ್ಚು: ಮುಸ್ಲಿಂ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ ಪೊಲೀಸರು - ಈಟಿವಿ ಭಾರತ ಕನ್ನಡ

ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ನಡೆಯುತ್ತಿರುವ ವಿವಾದದ ಬಗ್ಗೆ ಪೊಲೀಸರು ಮುಸ್ಲಿಂ ಮುಖಂಡರ ಶಾಂತಿ ಸಭೆ ನಡೆಸಿದ್ದು, ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.

police-held-a-meeting-with-muslim-leaders
ತಣ್ಣಗಾಗದ ಈದ್ಗಾ ಕಿಚ್ಚು: ಮುಸ್ಲಿಂ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ ಪೊಲೀಸರು
author img

By

Published : Aug 11, 2022, 7:52 AM IST

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿಂದೆಯಷ್ಟೇ ಹಿಂದೂ ಮುಖಂಡರ ಶಾಂತಿ ಸಭೆ ನಡೆಸಿದ್ದ ಪೊಲೀಸರು ನಿನ್ನೆ ಮುಸ್ಲಿಂ ಮುಖಂಡರ ಜೊತೆ ಸಭೆ ಮಾಡಿದ್ದಾರೆ.

ತಣ್ಣಗಾಗದ ಈದ್ಗಾ ಕಿಚ್ಚು: ಮುಸ್ಲಿಂ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ ಪೊಲೀಸರು

ಚಾಮರಾಜಪೇಟೆ ಪೊಲೀಸ್‌ ಠಾಣೆಯ ಸಭಾಂಗಣದಲ್ಲಿ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮತ್ತು ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 80 ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ವಿವಾದದ ವಿಚಾರವಾಗಿ ಪರ ವಿರೋಧ ಹೇಳಿಕೆಗಳ ಕುರಿತು ಚರ್ಚೆ ನಡೆಸಿದರು. ವಿವಾದದ ವಿಚಾರವಾಗಿ ಯಾವುದೇ ಕಾರಣಕ್ಕೂ ಪ್ರಚೋದನಕಾರಿ ಹೇಳಿಕೆ ನೀಡದಂತೆ ಎಚ್ಚರಿಸಿದರು. ಸಭೆಯಲ್ಲಿ ಕಂದಾಯ ಇಲಾಖೆ ಅಥವಾ ಹಿಂದೂ ಪರ ಸಂಘಟನೆಗಳಿಗೆ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅವಕಾಶ ನೀಡಬಾರದೆಂದು ಮುಸ್ಲಿಂ ಮುಖಂಡರು ಆಗ್ರಹಿಸಿದರು.

ಸರ್ಕಾರದ ಅಣತಿಯಂತೆ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ : ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಏನು ನಿರ್ದೇಶನ ನೀಡಲಿದೆಯೋ ಆ ಪ್ರಕಾರ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ. ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧವಾಗಿರಬೇಕು. ಇಲ್ಲವಾದಲ್ಲಿ ಕಾನೂನಡಿ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಲಕ್ಷ್ಮಣ ನಿಂಬರಗಿ ಸಭೆಯಲ್ಲಿ ಮುಖಂಡರಿಗೆ ತಿಳಿಸಿದರು.

40 ವರ್ಷದಿಂದ ಅಣ್ಣ ತಮ್ಮಂದಿರ ಹಾಗೇ ಬದುಕಿದ್ದೇವೆ : ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಜನರಲ್ ಸೆಕ್ರೇಟರಿ ಮೈನುದ್ದೀನ್, ನಾವು ಶಾಂತಿ ಕಾಪಾಡುವುದಾಗಿ ಹೇಳಿದ್ದೇವೆ. ಪೊಲೀಸರಿಗೆ ನಾವು ಸಹಕಾರ ನೀಡುತ್ತೇವೆ. ಚಾಮರಾಜಪೇಟೆಯಲ್ಲಿ ನಾವೆಲ್ಲ 40 ವರ್ಷದಿಂದ ಅಣ್ಣ ತಮ್ಮಂದಿರ ಹಾಗೇ ಇದ್ದೇವೆ. ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ. ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದೇವೆ. ಕಂದಾಯ ಇಲಾಖೆ ಸ್ಪಷ್ಟನೆ ನೀಡಿದ ಬಳಿಕ ಸ್ವಾತಂತ್ರೋತ್ಸವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಧ್ವಜಾರೋಹಣ ನಾವೇ ನಡೆಸುತ್ತೇವೆ : ಸಭೆಯಲ್ಲಿ ಭಾಗಿಯಾಗಿದ್ದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಮಾತನಾಡಿ, ಶಾಂತಿ ಸಭೆ ಆಗಿದೆ. ಪೊಲೀಸರು ಶಾಂತಿ ಕಾಪಾಡುವಂತೆ ಹೇಳಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾರೆ. ಮೈದಾನದಲ್ಲಿ ನಾವೇ ಧ್ವಜಾರೋಹಣ ಮಾಡುತ್ತೇವೆ. ನಾವು ಬಿಬಿಎಂಪಿ ಆದೇಶ ಒಪ್ಪುವುದಿಲ್ಲ.

ಇಲ್ಲಿಯೇ ಧ್ವಜಾರೋಹಣ ಮಾಡುತ್ತೇವೆ. ಕಂದಾಯ ಇಲಾಖೆಯ ಸಚಿವರಿಗೆ ಬುದ್ದಿ ಇದೆ. ಸುಪ್ರೀಂ ಆದೇಶ ಉಲ್ಲಂಘಿಸಿ ಕಂದಾಯ ಇಲಾಖೆ ಧ್ವಜಾರೋಹಣ ಮಾಡಲು ಸಾಧ್ಯವಿಲ್ಲ. ಆಸ್ತಿ ಕಂದಾಯ ಇಲಾಖೆಗೆ ಸಂಬಂಧಪಟ್ಟದ್ದು ಎಂಬುದಕ್ಕೆ ಇಲಾಖೆಯಲ್ಲಿ ಒಂದು ತುಂಡು ಪೇಪರ್ ಸಾಕ್ಷಿ ಇಲ್ಲ. ಇದ್ದರೆ ತೋರಿಸಲಿ ಸಾರ್ವಜನಿಕರ ಮುಂದೆಯೇ ಇಡಲಿ ನಮ್ಮ ಕಡೆಯಿಂದ ಯಾವುದೇ ಒತ್ತಡ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ :ಕೆಎಂಎಫ್ ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಅನ್ವಯ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.