ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಂತಿಮ ಟೆಸ್ಟ್ ಪಂದ್ಯ ನಡೆಯಲಿರುವ ಹಿನ್ನಲೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಾ ಪೊಲೀಸ್ ಕಣ್ಗಾವಲು ಇಡಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಪಕ್ಕ ಇರುವ ಹೈಕೋರ್ಟ್ಗೆ ಅನಾಮದೇಯ ಪತ್ರದ ಮೂಲಕ ಬೆದರಿಕೆ ಬಂದಿರುವ ಹಿನ್ನಲೆ ಸ್ಟೇಡಿಯಂ ಸುತ್ತಾ ಮುತ್ತಾ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಹೀಗಾಗಲೆ ಮುಂಜಾನೆಯಲಿಂದಲೇ ಪೊಲೀಸರು ಸ್ಟೇಡಿಯಂ ಸುತ್ತಾ ಗಸ್ತು ತಿರುಗುತ್ತಿದ್ದಾರೆ. ಕೇಂದ್ರವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ನೇತೃತ್ವದಲ್ಲಿ ಎಸಿಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಕಾನ್ಸ್ಸ್ಟೇಬಲ್, ಹೊಯ್ಸಳ, ಕೆ.ಎಸ್.ಆರ್.ಪಿ, ನಿಯೋಜನೆ ಮಾಡಲಾಗಿದೆ.
ಭಾನುವಾರದಂದು ಪಂದ್ಯ ನಡೆಯುತ್ತಿರುವುದರಿಂದ ಹೀಗಾಗಲೆ ಟಿಕೆಟ್ ಸೋಲ್ಡ್ಔಟ್ ಆಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಸೇರಲಿರುವುದರಿಂದ ಸ್ಟೇಡಿಯಂ ಸುತ್ತ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ.