ಬೆಂಗಳೂರು: ನಾಳೆ ಮುಸಲ್ಮಾನರ ಪವಿತ್ರ ಹಬ್ಬವಾದ ರಂಜಾನ್ ಹಿನ್ನೆಲೆಯಲ್ಲಿ ನಗರದಲ್ಲಿರುವ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರು ತಿಳಿಸಿದ್ದಾರೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳಿಗೆ ಜನ ಸಂಚಾರ ನಿಷೇಧಿಸಿದೆ. ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಕೆಲವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪೊಲೀಸರು ಅಯಾ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಹಜರತ್ಗಳಿಗೆ ಸೂಚನೆ ನೀಡಿದ್ದಾರೆ.
ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಅಯಾ ಮಸೀದಿಯ ಹಜರತ್ಗಳಿಂದ ಜನರಿಗೆ ಮಾಹಿತಿ ನೀಡಲಾಗುತ್ತಿದೆ. ಶಿವಾಜಿನಗರ ಪೊಲೀಸರು ತಮ್ಮ ವ್ಯಾಪ್ತಿಯ ಎಲ್ಲಾ ಮಸೀದಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಆಮ್ಲಜನಕ ಪೂರೈಕೆಯಲ್ಲಿ ಕೇಂದ್ರಕ್ಕೆ ಕನ್ನಡಿಗರ ಬಗ್ಗೆ ಈ ಮಟ್ಟಿಗಿನ ತಾತ್ಸಾರ ಏಕೆ: ಹೆಚ್ಡಿಕೆ ಪ್ರಶ್ನೆ