ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿರುವ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ( Music Director Hamsalekha) ಅವರಿಗೆ ಇಂದು ವಿಚಾರಣೆ ಹಾಜರಾಗುವಂತೆ ಹನುಮಂತನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಮಾತನಾಡಿ, ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ವಾಸ್ತವ್ಯ ಹೂಡುವುದನ್ನು ಖಂಡಿಸಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬ್ರಾಹ್ಮಣ ಸಮುದಾಯ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ಹೇಳಿದ್ದಾರೆ.
ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಂಸಲೇಖ ಅವರು ಕ್ಷಮೆಯಾಚಿಸಿದ್ದರು. ಈ ಮಧ್ಯೆ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ಹಂಸಲೇಖ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೃಷ್ಣ ಎಂಬುವರು ದೂರು ನೀಡಿದ್ದರು.
ಜೊತೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಸಂಘಟನೆಯು ಪೊಲೀಸ್ ಕಮಿಷನರ್ ಕಮಲ್‌ಪಂತ್ ಅವರನ್ನು ಭೇಟಿ ಮಾಡಿ ದೂರು ನೀಡಿತ್ತು. ಹೀಗಾಗಿ, ನಾಳೆ ಬೆಳಗ್ಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.
ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕಾಲಿಡಲು ಯಾರೂ ಮುಂದಾಗುತ್ತಿಲ್ಲ: ಬಿಎಸ್ವೈ