ETV Bharat / state

ಗೂಂಡಾ ಕಾಯಿದೆಯಡಿ ಬಂಧಿತನಾದವನಿಗೆ ಆತನ ಭಾಷೆಯಲ್ಲಿ ವಿವರಿಸಲು ಪೊಲೀಸರು ವಿಫಲ; ಆರೋಪಿ ಬಿಡುಗಡೆಗೆ ಹೈಕೋರ್ಟ್​ ಆದೇಶ - ಭಾರತೀಯ ಸಂವಿಧಾನ

ಗೂಂಡಾ ಕಾಯಿದೆಯಡಿ ಬಂಧನಕ್ಕೆ ಒಳಗಾದವನಿಗೆ ಅರ್ಥವಾಗುವ ಭಾಷೆಯಲ್ಲಿ ವಿವರಿಸಲು ವಿಫಲವಾದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಯ ಬಿಡುಗಡೆಗೆ ಹೈಕೋರ್ಟ್​ ಆದೇಶಿಸಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Dec 13, 2023, 7:45 AM IST

ಬೆಂಗಳೂರು: ಗೂಂಡಾ ಕಾಯಿದೆಯಡಿ ಬಂಧಿತ ಆರೋಪಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ಹೈಕೋರ್ಟ್ ಆತನ ಬಿಡುಗಡೆಗೆ ಆದೇಶ ನೀಡಿದೆ. ಬಂಧಿತ ವ್ಯಕ್ತಿ ರೋಷನ್ ಜಮೀರ್ ಅವರ ತಂದೆ ಮೊಹಮ್ಮದ್ ಶಫೀವುಲ್ಲಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್‌ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಆರೋಪಿ ಅರೇಬಿಕ್ ಶಾಲೆಯಲ್ಲಿ ಕೇವಲ ಎರಡನೇ ತರಗತಿಯವರೆಗೆ ಓದಿದ್ದಾನೆ. ಮತ್ತು ಆತ ಮೊದಲ ಭಾಷೆಯಾಗಿ ಅರೇಬಿಕ್ ಅಥವಾ ಉರ್ದು ಮಾತ್ರ ಓದಿದ್ದಾನೆ. ಆತನಿಗೆ ಇತರೆ ಭಾಷೆಗಳು ತಿಳಿದಿಲ್ಲ. ಜೊತೆಗೆ ಆತ ಓದಿರುವುದು ಮೂರು ವರ್ಷ ಮಾತ್ರ. ಆದರೆ, ಭಾರತೀಯ ಸಂವಿಧಾನದ ಕಲಂ 22(5)ರ ಪ್ರಕಾರ ಅಧಿಕಾರಿಗಳು ಯಾವುದೇ ಬಂಧಿತ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆಗಳನ್ನು ಒದಗಿಸಬೇಕು. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ. ಅಲ್ಲದೆ, ಅಧಿಕಾರಿಗಳು ಆರೋಪಿಯನ್ನು ಏಕೆ ಬಂಧಿಸಲಾಗಿದೆ ಮತ್ತು ಪ್ರಕರಣದ ವಿವರಗಳನ್ನು ಆತನಿಗೆ ತಿಳಿದಿರುವ ಭಾಷೆಗೆ ಅನುವಾದಿಸಿ, ಆತನಿಗೆ ನೀಡುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಆತನ ಬಿಡುಗಡೆಗೆ ಆದೇಶಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರಿಂದ ವಾದ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿ ಕೇವಲ ಎರಡನೇ ತರಗತಿವರೆಗೆ ಉರ್ದು ಮಾಧ್ಯಮದಲ್ಲಿ ಓದಿದ್ದಾನೆ. ಆದರೆ, ಅಧಿಕಾರಿಗಳು ಆತನಿಗೆ ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿದ್ದ ದಾಖಲೆಗಳನ್ನು ಮಾತ್ರ ಒದಗಿಸಿದ್ದಾರೆ. ಇದು ಸಂವಿಧಾನದ ಕಲಂ 22(5)ರ ಉಲ್ಲಂಘನೆಯಾಗಿದೆ ಎಂದು ವಿವರಿಸಿದ್ದರು. ಅಲ್ಲದೆ, ಆರೋಪಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆ ಒದಗಿಸದ ಕಾರಣ ಆತನಿಗೆ ತನ್ನನ್ನು ಏಕೆ ಬಂಧಿಸಲಾಗಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲಾಗಿಲ್ಲ. ಜೊತೆಗೆ ಗೂಂಡಾ ಕಾಯಿದೆ ಸೆಕ್ಷನ್ 8ರ ಅಡಿ ಮನವಿ ಸಲ್ಲಿಸಲು ಸಾಧ್ಯವಾಗಿಲ್ಲ. ಹಾಗಾಗಿ ಬಿಡುಗಡೆಗೆ ಆದೇಶ ನೀಡಬೇಕು ಎಂದು ಕೋರಿದ್ದರು.

ಆದ್ರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ಆರೋಪಿ ಕಳ್ಳತನ ಹಾಗೂ ಅಪರಾಧ ಕೃತ್ಯ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾನೆ. 2013ರಿಂದ ಹಲವು ಅಪರಾಧ ಕೃತ್ಯಗಳನ್ನು ಎಸಗಿದ್ದಾನೆ. ಆತನ ವಿರುದ್ಧ 15 ಪ್ರಕರಣಗಳು ಬಾಕಿಯಿವೆ. ಹಾಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಗೂಂಡಾ ಕಾಯಿದೆ ವಿಧಿಸಿ ಬಂಧಿಸಲಾಗಿದೆ ಎಂದು ವಾದಿಸಿದ್ದರು. ಜೊತೆಗೆ ಆರೋಪಿಗೆ ಇಂಗ್ಲಿಷ್ ಮತ್ತು ಕನ್ನಡ ಭಾಷೆ ತಿಳಿದಿದೆ ಎಂದು ನ್ಯಾಯ ಪೀಠಕ್ಕೆ ವಿವರಿಸಿದ್ದರು.

ಪ್ರಕರಣದ ಹಿನ್ನೆಲೆ ಏನು?: ಆರೋಪಿ ರೋಷನ್ ಜಮೀರ್‌ ಅಲಿಯಾಸ್‌ ಜಮ್ಮು ಕಳೆದ 2013ರಿಂದ ಕಳ್ಳತನ, ದರೋಡೆ ಸೇರಿದಂತೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪವಿತ್ತು. ಹಾಗಾಗಿ ಆತನ ವಿರುದ್ಧ 2023ರ ಏ.27 ರಂದು ಪೊಲೀಸರು ಗೂಂಡಾ ಕಾಯಿದೆ ವಿಧಿಸಿದ್ದರು. ಮತ್ತು ಅದೇ ದಿನ ಆತನನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು. ನಂತರ ಸರ್ಕಾರ ಆತನ ಬಂಧನ ಆದೇಶವನ್ನು ಖಾಯಂಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆತನ ತಂದೆ ಹೈಕೋರ್ಟ್​ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭ: ಷರತ್ತುಗಳು ಅನ್ವಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.