ETV Bharat / state

ಈಶ್ವರಪ್ಪ ರಾಜೀನಾಮೆ: ಸಿಎಂ ಅಧಿಕೃತ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ

ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಪಾರ ಪ್ರಮಾಣದ ಬೆಂಬಲಿಗರ ಜೊತೆಯಲ್ಲಿ ರಾಜೀನಾಮೆ ಸಲ್ಲಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ರಸ್ತೆಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸಿಎಂ ಅಧಿಕೃತ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

author img

By

Published : Apr 15, 2022, 7:48 PM IST

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್​ ಭದ್ರತೆಯ ನೇತೃತ್ವ ವಹಿಸಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ ಅಪಾರ ಪ್ರಮಾಣದ ಬೆಂಬಲಿಗರ ಜೊತೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ರಸ್ತೆಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಲವಾರು ಬಿಎಂಟಿಸಿ ಬಸ್​ಗಳನ್ನು ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ.

ರಾಜೀನಾಮೆ ಸಲ್ಲಿಸಲು ಆಗಮಿಸುವ ಸಚಿವ ಈಶ್ವರಪ್ಪ ಅವರಿಗೆ ಮಾತ್ರ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಅವರ ಬೆಂಬಲಿಗರನ್ನು ಪ್ರತ್ಯೇಕವಾಗಿ ಒಂದೆಡೆ ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನಾಳೆಯಿಂದ ಜೆಡಿಎಸ್ 'ಜನತಾ ಜಲಧಾರೆ' ಆರಂಭ: ಒಟ್ಟು 94 ಕಡೆ ಜಲಸಂಗ್ರಹ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.