ಬೆಂಗಳೂರು: ಆಗ ತಾನೇ ಹುಟ್ಟಿದ ನವಜಾತ ಗಂಡು ಶಿಶುವನ್ನು ಪೋಷಕರು ಬೀದಿಯಲ್ಲೇ ಬಿಸಾಡಿ ಹೋಗಿರುವ ಘಟನೆ ನಡೆದಿದೆ.
ತಲಘಟ್ಟಪುರ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದ ಖಾಲಿ ನಿವೇಶನದಲ್ಲಿ ಶಿಶು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ರಕ್ಷಿಸಿದರು.
ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಶಿಶುವನ್ನು ರಕ್ಷಿಸಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗು ಸುರಕ್ಷಿತವಾಗಿದ್ದು, ಪೋಷಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.