ಬೆಂಗಳೂರು: ಮಹಾಮಾರಿ ಕೊರೊನಾಗೆ ಮತ್ತೋರ್ವ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ. ಎಎಸ್ಐ ಹನುಮಂತರಾಯಪ್ಪ ಮೃತ ಪೊಲೀಸ್ ಸಿಬ್ಬಂದಿ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರಾದ ಆರಕ್ಷಕರು ಸಹ ಸಾಕಷ್ಟು ಸಂಖ್ಯೆಯಲ್ಲಿ ಮೃತಪಡುತ್ತಿದ್ದು, ಇದೀಗ ಹನುಮಂತರಾಯಪ್ಪ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು ದಾಖಲೆಯ ಕೊರೊನಾ ಪ್ರಕರಣ: 80 ಮಂದಿ ಬಲಿ!
ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಹನುಮಂತರಾಯಪ್ಪ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಡಿಜಿ ಕಚೇರಿಯ ಲೆಕ್ಕಾಧಿಕಾರಿ ಮಂಜುನಾಥ್ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.