ETV Bharat / state

ಪರಮೇಶ್ವರ್ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಸಾರ: ತನಿಖೆ ಚುರುಕುಗೊಳಿಸಿದ ಪೊಲೀಸರು - ಮಾಜಿ ಗೃಹ ಸಚಿವರ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ

ಸಾಮಾಜಿಕ‌ ಜಾಲತಾಣದಲ್ಲಿ‌ ಮಾಜಿ ಸಚಿವ ಜಿ.ಪರಮೇಶ್ವರ್ ಹಾಗೂ ಅವರ ಮಗಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ-ತನಿಖೆ ಚುರುಕುಗೊಳಿಸಿದ ಪೊಲೀಸರು.

Representative image
ಪ್ರಾತಿನಿಧಿಕ ಚಿತ್ರ
author img

By

Published : Mar 1, 2023, 7:25 AM IST

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಉಪ ಮುಖ್ಯಮಂತ್ರಿ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಸಂಬಂಧ‌ ಪ್ರಕರಣ‌ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೆನ್ ಪೊಲೀಸರು‌ ತನಿಖೆ ಚುರುಕುಗೊಳಿಸಿದ್ದಾರೆ‌. ಫೇಸ್​​ಬುಕ್ ಹಾಗೂ ಯೂಟ್ಯೂಬ್ ಸೇರಿದಂತೆ‌ ಸಾಮಾಜಿಕ‌ ಜಾಲತಾಣದಲ್ಲಿ‌ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹಾಗೂ ಅವರ ಮಗಳ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ್ದವರ ವಿರುದ್ಧ ನೀಡಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸಂಬಂಧಪಟ್ಟ ಯೂಟ್ಯೂಬ್ ಚಾನಲ್‌ ಮಾಲೀಕರಿಗೆ ನೋಟಿಸ್​​ ಜಾರಿ‌ ಮಾಡಿದ್ದಾರೆ.

ಫೇಸ್​​ಬುಕ್ ಮತ್ತು ಯೂಟ್ಯೂಬ್​​ನಲ್ಲಿ ನಕಲಿ ಖಾತೆ ತೆರೆದು ವಿಡಿಯೋ ಅಪ್ಲೋಡ್ ಮಾಡಿ ಅವಹೇಳನ ಮಾಡಲಾಗಿದೆ. ರಾಜಕೀಯವಾಗಿ ಅವರನ್ನು ತಗ್ಗಿಸಲು ಸಾಮಾಜಿಕ ಜಾಲತಾಣಗಳನ್ನ ಬಳಸಿಕೊಂಡಿದ್ದಾರೆ. ಅಲ್ಲದೆ ಪರಮೇಶ್ವರ್ ಘನತೆಗೆ ಕುಂದು ತರಲು ಯತ್ನಿಸಿದ್ದಾರೆ‌ ಎಂದು ಅವರ ಆಪ್ತ ಸೋಮಶೇಖರ್ ಎಂಬುವರು ದೂರಿನಲ್ಲಿ ಉಲ್ಲೇಖಿಸಿದ್ದರು.

ಕಾನ್ಸ್​​ಟೇಬಲ್ ಖಾತೆಗೆ ಕನ್ನ: ಮತ್ತೊಂದೆಡೆ ಸೈಬರ್ ವಂಚಕರು ಪೊಲೀಸರನ್ನೂ ಬಿಡುತ್ತಿಲ್ಲ. ಅಕೌಂಟ್ ಬ್ಲಾಕ್ ಆಗಿದೆ ಎಂದು ನಂಬಿಸಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್​​ಟೇಬಲ್ ಒಬ್ಬರಿಗೆ ಸುಮಾರು 73 ಸಾವಿರ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಎಆರ್ ಕಾನ್ಸ್​​ಟೇಬಲ್ ಆಗಿರುವ ಭದ್ರಯ್ಯ ಎಂಬುವರಿಗೆ ಕರೆ ಮಾಡಿದ್ದ ಸೈಬರ್ ಖದೀಮರು 'ನಿಮ್ಮ ಎಬಿಐ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ. ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು' ಎಂದಿದ್ದಾರೆ. ನಂತರ ಒಂದು ಲಿಂಕ್ ಕಳಿಸಿದ್ದು, ಅದನ್ನ ಕ್ಲಿಕ್ ಮಾಡಿದಾಗ ಭದ್ರಯ್ಯರ ಮೊಬೈಲ್ ನಂಬರಿಗೆ ಲಿಂಕ್ ಆಗಿದ್ದ ಎರಡು ಖಾತೆಯಲ್ಲಿದ್ದ ಒಟ್ಟು 72,998/- ರೂ ಹಣ ಕಡಿತವಾಗಿದೆ. ಸದ್ಯ ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ಭದ್ರಯ್ಯ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಗರದ 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಡಿ.ರೂಪಾ ಮೌದ್ಗಿಲ್ ಅವರು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಿಬೇಕು. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದೂರುದಾರರು ಚಾಮರಾಜನಗರ ಹಾಗೂ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಆರೋಪಿ ಡಿ.ರೂಪಾ, ದೂರುದಾರರ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ, ಈ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ, ಮೊಕದ್ದಮೆಯನ್ನು ಹೆಚ್ಚಿನ ವಿಚಾರಣೆಗಾಗಿ ಮಾ. 3ಕ್ಕೆ ಮುಂದೂಡಿತು.

ಇದನ್ನೂ ಓದಿ: ಡಿ. ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.