ಬೆಂಗಳೂರು: ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 7.5 ರಷ್ಟು ಮೀಸಲು ಜಾರಿಗೆ ಒತ್ತಾಯಿಸಿ ವಾಲ್ಮೀಕಿ ಸಮಾಜದ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೂನ್ 9 ರಂದು ರಾಜನಹಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಪ್ರತಿಭಟನೆ ಆರಂಭಿಸಿದ್ದರು. ಇಂದು ಬೆಂಗಳೂರು ತಲುಪಿದ್ದಾರೆ.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪಾದಯಾತ್ರೆ ನೇತೃತ್ವ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸರ್ಕಾರದ ರೀತಿಯಲ್ಲೇ ರಾಜ್ಯ ಸರ್ಕಾರದಲ್ಲೂ ಮೀಸಲು ಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಫ್ರೀಡಂಪಾರ್ಕ್ ನಿಂದ ಹೊರಟ ಪ್ರತಿಭಟನಾಕಾರರು, ವಿಧಾನಸೌಧಕ್ಕೆ ಹೋಗಲು ಅನುಮತಿ ನೀಡುವಂತೆ ಒತ್ತಾಯಿಸಿದರು. ಆದರೆ, ಇದಕ್ಕೆ ಪೊಲೀಸರು ತಡೆ ಒಡ್ಡಿದ್ದರಿಂದ ಪ್ರತಿಭಟನಾನಿರತರು ಬ್ಯಾರಿಕೇಡ್ ಹತ್ತಿ ಆಕ್ರೋಶ ಹೊರಹಾಕಿದರು. ಸದ್ಯ ಫ್ರೀಡಂ ಪಾರ್ಕ್ನಿಂದ ಪೊಲೀಸರ ತಡೆಯನ್ನೂ ಮೀರಿ, ವಿಧಾನಸೌಧದೆಡೆಗೆ ನಡೆದ ಪ್ರತಿಭಟನಾಕಾರರು ಸಾಗಿದ್ದಾರೆ.