ETV Bharat / state

ಮೇಕೆದಾಟು ಯೋಜನೆ ಮರುಪರಿಶೀಲನೆ ಆದೇಶದ ಹಿಂದೆ ರಾಜಕೀಯ ದುರುದ್ದೇಶ.. ಡಿಕೆಶಿ ಆರೋಪ

author img

By

Published : Aug 9, 2019, 9:22 AM IST

ಸುಪ್ರೀಂಕೋರ್ಟ್​ ಆದೇಶದ ಬಳಿಕವೂ ಮೇಕೆದಾಟು ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂಬ ಕೇಂದ್ರ ಸರ್ಕಾರದ ಆದೇಶದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಡಿ ಕೆ ಶಿವಕುಮಾರ್, ಈ ಬಗ್ಗೆ ಪಕ್ಷಬೇಧ ಮರೆತು ಎಲ್ಲರೂ ಹೋರಾಟಕ್ಕೆ ಅಣಿಯಾಗಬೇಕೆಂದು ಕರೆ ನೀಡಿದ್ದಾರೆ.

ಮೇಕೆದಾಟು ಯೋಜನೆ ಮರುಪರಿಶೀಲನೆ ಆದೇಶ ಹಿಂದೆ ರಾಜಕೀಯ ದುರುದ್ದೇಶ: ಡಿಕೆಶಿ ಆರೋಪ

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಮೇಕೆದಾಟು ಯೋಜನೆಗೆ ಈಗಾಗಲೇ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಲ್ಲದೇ, ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈಗಾಗಲೇ ಡಿಪಿಆರ್ ಸಲ್ಲಿಸಲಾಗಿದೆ. ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿರುವಾಗ ಮರುಪರಿಶೀಲನೆ ಮಾಡುವಂತೆ ಕೇಂದ್ರವು ಸೂಚಿಸಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಅವರು ಹೇಳಿಕೆಯಲ್ಲಿ ಆಪಾದಿಸಿದ್ದಾರೆ.

ಇಂದು ನಿನ್ನೆಯದಲ್ಲ:

ಮೇಕೆದಾಟು ಸಮತೋಲನ ಅಣೆಕಟ್ಟೆ ಯೋಜನೆ ಇವತ್ತು-ನಿನ್ನೆ ರೂಪಿತವಾದುದಲ್ಲ. 40 ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಗೆ ಈಗಾಗಲೇ ಸ್ಥಳವನ್ನೂ ಗುರುತಿಸಲಾಗಿದೆ. ವಿನಾಕಾರಣ ಸಮುದ್ರದ ಪಾಲಾಗಲಿರುವ ನೀರನ್ನು ಯೋಜಿತ ಅಣೆಕಟ್ಟೆಯಲ್ಲಿ ಸಂಗ್ರಹಿಸಿಟ್ಟುಕೊಂಡು ವಿದ್ಯುತ್ ಉತ್ಪಾದನೆ ಹಾಗೂ ಸ್ವಲ್ಪ ಪ್ರಮಾಣದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಘನ ಉದ್ದೇಶವನ್ನು ಹೊಂದಲಾಗಿದೆ. ಕಾವೇರಿ ನ್ಯಾಯಾಧಿಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರಿನ ಪರಿಮಿತಿಯಲ್ಲೇ ಯೋಜನೆ ರೂಪಿಸಲಾಗಿದೆ. ಹೀಗಿರುವಾಗ ಏಕಾಏಕಿ ಯೋಜನೆ ಮರುಪರಿಶೀಲನೆಗೆ ಸೂಚನೆ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹೋರಾಟಕ್ಕೆ ಅಣಿಯಾಗಬೇಕು:

ಯಾವುದೇ ಕಾರಣಕ್ಕೂ ಈ ಯೋಜನೆ ರದ್ದು ಪಡಿಸುವುದಕ್ಕಾಗಲಿ, ಸ್ಥಳಾಂತರಿಸುವುದಕ್ಕಾಗಲಿ ಅವಕಾಶ ನೀಡುವುದಿಲ್ಲ. ಪಕ್ಷಬೇಧ ಮರೆತು ಎಲ್ಲಾ ಸಂಸದರು ಹಾಗೂ ಶಾಸಕರು ಹೋರಾಟಕ್ಕೆ ಅಣಿಯಾಗಬೇಕಿದೆ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಮೊದಲು ನಿರ್ಣಯವಾಗಿರುವಂತೆ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Intro:newsBody:ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರದ ಸೂಚನೆ ಹಿಂದೆ ರಾಜಕೀಯ ದುರುದ್ದೇಶ: ಡಿಕೆಶಿ

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರ ಸರಕಾರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಯೋಜನೆಗೆ ಈಗಾಗಲೇ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೇ, ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಈಗಾಗಲೇ ಡಿಪಿಆರ್ ಸಲ್ಲಿಸಲಾಗಿದೆ. ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿರುವಾಗ ಮರುಪರಿಶೀಲನೆ ಮಾಡುವಂತೆ ಕೇಂದ್ರವು ಸೂಚಿಸಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಅವರು ಹೇಳಿಕೆಯಲ್ಲಿ ಆಪಾದಿಸಿದ್ದಾರೆ.
ಇಂದು ನಿನ್ನೆಯದಲ್ಲ
ಮೇಕೆದಾಟು ಸಮತೋಲನ ಅಣೆಕಟ್ಟೆ ಯೋಜನೆ ಇವತ್ತು-ನಿನ್ನೆ ರೂಪಿತವಾದುದಲ್ಲ. 40 ವರ್ಷಗಳ ಹಿಂದೆಯೇ ರಾಜ್ಯ ಸರಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಗೆ ಈಗಾಗಲೇ ಸ್ಥಳವನ್ನೂ ಗುರುತಿಸಲಾಗಿದೆ. ವಿನಾಕಾರಣ ಸಮುದ್ರದ ಪಾಲಾಗಲಿರುವ ನೀರನ್ನು
ಯೋಜಿತ ಆಣೆಕಟ್ಟೆಯಲ್ಲಿ ಸಂಗ್ರಹಿಸಿಟ್ಟುಕೊಂಡು ವಿದ್ಯುತ್ ಉತ್ಪಾದನೆ ಹಾಗೂ ಸ್ವಲ್ಪ ಪ್ರಮಾಣದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಘನ ಉದ್ದೇಶವನ್ನು ಹೊಂದಲಾಗಿದೆ. ಕಾವೇರಿ ನ್ಯಾಯಾಧೀಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರಿನ ಪರಿಮಿತಿಯಲ್ಲೇ ಯೋಜನೆ ರೂಪಿಸಲಾಗಿದೆ. ಹೀಗಿರುವಾಗ ಏಕಾಏಕಿ ಯೋಜನೆ ಮರುಪರಿಶೀಲನೆಗೆ ಸೂಚನೆ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಹೋರಾಟಕ್ಕೆ ಅಣಿಯಾಗಬೇಕು
ಯಾವುದೇ ಕಾರಣಕ್ಕೂ ಈ ಯೋಜನೆ ರದ್ದು ಪಡಿಸಲಾಗಲಿ, ಸ್ಥಳಾಂತರ ಮಾಡಲಾಗಲಿ ಅವಕಾಶ ನೀಡುವುದಿಲ್ಲ. ಪಕ್ಷಬೇಧ ಮರೆತು ಎಲ್ಲ ಸಂಸದರು ಹಾಗೂ ಶಾಸಕರು ಹೋರಾಟಕ್ಕೆ ಅಣಿಯಾಗಬೇಕಿದೆ. ಕೇಂದ್ರ ಸರಕಾರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಮೊದಲು ನಿರ್ಣಯವಾಗುರುವಂತೆ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.