ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ವಿಧಾನ ಪರಿಷತ್ನ ಸಭಾಪತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದೆ.
ಖಾಸಗಿ ಹೋಟೆಲ್ನಲ್ಲಿ ಕರೆದಿರುವ ಸಭೆಗೆ ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕರಾದ ಕೆ.ಅನ್ನದಾನಿ, ಶ್ರೀನಿವಾಸಗೌಡ, ಶಿವಲಿಂಗೇಗೌಡ, ಸುರೇಶ್ ಗೌಡ, ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ತಿಪ್ಪೇಸ್ವಾಮಿ, ರಮೇಶ್ ಗೌಡ, ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಅಪ್ಪಾಜಿಗೌಡ ಸೇರಿದಂತೆ ಜೆಡಿಎಸ್ನ ಬಹುತೇಕ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಗುಬ್ಬಿ ಶಾಸಕ ಶ್ರೀನಿವಾಸ್, ಗೌರಿಶಂಕರ್, ಡಿ.ಸಿ.ತಮ್ಮಣ್ಣ, ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಇತರ ಶಾಸಕರು ಸಭೆಗೆ ಬಂದಿರಲಿಲ್ಲ. ಸಭೆಗೂ ಮುನ್ನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗಾರರ ಜೊತೆ ಮಾತನಾಡಿ, ಇವತ್ತಿನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವ ಉದ್ದೇಶ ಜಂಟಿ ಅಧಿವೇಶನ ನಡೆಯುತ್ತಿದೆ. ಶಾಸಕರೆಲ್ಲ ಬೆಂಗಳೂರಿನಲ್ಲಿ ಇರುವುದರಿಂದ ಸಭೆ ಕರೆಯಲಾಗಿದೆ. ಪಕ್ಷದ ಸಂಘಟನೆ ಸಂಬಂಧಪಟ್ಟಂತೆ ಮುಂದಿನ ನಮ್ಮ ರೂಪುರೇಷೆಗಳನ್ನು ಸಿದ್ಧಪಡಿಸಲು ಮತ್ತು ಈಗಿನ ರಾಜಕೀಯ ಬೆಳವಣಿಗೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ಓದಿ: ಮತ್ತೆ ಸಭಾಪತಿ ಪದಚ್ಯುತಿ ಪ್ರಸ್ತಾಪ.. ಕಾನೂನು ಪಾಠ ಮಾಡ್ಬೇಡಿ ಎಂದ ಪ್ರತಾಪ್ ಚಂದ್ರ ಶೆಟ್ಟಿ..
ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ಇವೆ. ಯಾವ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕೆಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕೆಂಬುದರ ಬಗ್ಗೆ ಚರ್ಚಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.