ETV Bharat / state

ಕಾಂಗ್ರೆಸ್​ ಸೇರ್ಪಡೆಯತ್ತ ಜೆಡಿಎಸ್ ಶಾಸಕರ ಒಲವು.. ಗುಬ್ಬಿ ಶಾಸಕರ ಕೈ ಸೇರ್ಪಡೆಗೆ ವೇದಿಕೆ ಸಿದ್ಧ?

ತುಮಕೂರು ಜೆಡಿಎಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧವೇ ಶಾಸಕ ಶ್ರೀನಿವಾಸ್ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಜೊತೆಗೆ ಇತ್ತೀಚಿಗೆ ನಡೆದ ಸಮಾವೇಶಕ್ಕೂ ಅವರನ್ನು ಆಹ್ವಾನಿಸಿರಲಿಲ್ಲ ಎಂಬ ಆರೋಪ ಸಹ ಕೇಳಿಬಂದಿತ್ತು. ಇದೀಗ ಶ್ರೀನಿವಾಸ್ ಕಾಂಗ್ರೆಸ್​​​ ಪಕ್ಷ ಸೇರುವತ್ತ ಒಲವು ತೋರುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

political-talk-gubbi-mla-will-be-part-of-congress-soon
ತುಮಕೂರು: ಕಾಂಗ್ರೆಸ್​ ಸೇರ್ಪಡೆಯತ್ತ ಜೆಡಿಎಸ್ ಶಾಸಕರ ಒಲವು
author img

By

Published : Nov 1, 2021, 2:21 PM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ತುಮಕೂರು ಪ್ರವಾಸ ಉತ್ತಮ ಫಲ ನೀಡಿದ್ದು, ಮತ್ತೋರ್ವ ಜೆಡಿಎಸ್ ಶಾಸಕ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎನ್ನಲಾಗ್ತಿದೆ. ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

2018ರ ವಿಧಾನಸಭೆ ಚುನಾವಣೆಯಲ್ಲಿ ತುಮಕೂರಿನ 11 ಕ್ಷೇತ್ರಗಳ ಪೈಕಿ ಜೆಡಿಎಸ್ ಹಾಗೂ ಬಿಜೆಪಿ ತಲಾ 4 ಹಾಗೂ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜೇಶ್ ಗೌಡ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಸದಸ್ಯರ ಬಲ 5ಕ್ಕೆ ಏರಿಕೆ ಆಗಿದೆ.

ಮಾಜಿ ಸಚಿವ ಚೆನ್ನಿಗಪ್ಪ ಪುತ್ರ ಡಿ.ಸಿ. ಗೌರಿಶಂಕರ್ ಸ್ವಾಮಿ ತುಮಕೂರು ಗ್ರಾಮಾಂತರ ಶಾಸಕರಾಗಿದ್ದರು. ಮಧುಗಿರಿ ಶಾಸಕರಾಗಿ ಎಂವಿ ವೀರಭದ್ರಯ್ಯ ಮತ್ತು ಗುಬ್ಬಿ ಶಾಸಕರಾಗಿ ಎಸ್ ಆರ್ ಶ್ರೀನಿವಾಸ್ ಇದ್ದಾರೆ. ಮೂವರು ಶಾಸಕರನ್ನ ಹೊಂದಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ತಂತ್ರ ಆರಂಭಿಸಿದೆ.

ಜೆಡಿಎಸ್​​​ನ ಹಾಲಿ ಮತ್ತು ಮಾಜಿ ಪ್ರತಿನಿಧಿಗಳಾದ ತುಮಕೂರು ಜಿಲ್ಲೆಯ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಮಧುಗಿರಿ ಶಾಸಕ ಎಂ.ವಿ ವೀರಭದ್ರಯ್ಯ, ಕೊರಟಗೆರೆ ಮಾಜಿ ಶಾಸಕ ಸುಧಾಕರ್ ಲಾಲ್, ಚಿಕ್ಕನಾಯಕನಹಳ್ಳಿ ಸಿ.ಬಿ. ಸುರೇಶ್​​​ ಬಾಬು, ಪಾವಗಡದ ಕೆ.ಎಂ. ತಿಮ್ಮರಾಯಪ್ಪ ಅವರನ್ನ ಕಾಂಗ್ರೆಸ್ ಮತ ಸೆಳೆಯುವ ಪ್ರಯತ್ನ ಆರಂಭಿಸಿದೆ. ತೆರೆಮರೆಯಲ್ಲಿ ಶ್ರೀನಿವಾಸ್ ಈಗಾಗಲೇ ಎರಡು ಮೂರು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.

ತುಮಕೂರು ಜಿಲ್ಲೆಗೆ ಇಂದು ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಗುಬ್ಬಿ ತಾಲೂಕಿನ ಚಾಲುಕ್ಯ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಇಂದು ಸಂಜೆವರೆಗೂ ಸಿದ್ದರಾಮಯ್ಯ ತುಮಕೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಗುಬ್ಬಿ ಶಾಸಕ ಶ್ರೀನಿವಾಸ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.

ಗುಬ್ಬಿ ಕ್ಷೇತ್ರದಲ್ಲಿ ಶ್ರೀನಿವಾಸ್ ಸಾಕಷ್ಟು ಪ್ರಾಬಲ್ಯ ಹೊಂದಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾ 36ರಷ್ಟು ಅಂದರೆ 55,572 ಮತಗಳಿಂದ ಗೆಲುವು ಸಾಧಿಸಿದ್ದರು. 2008ರಿಂದ ನಿರಂತರ ಮೂರನೇ ಅವಧಿಗೆ ಜೆಡಿಎಸ್ ಶಾಸಕರಾಗಿ ಗೆದ್ದು ಬರುತ್ತಿರುವ ಅವರು ಬಿಜೆಪಿಯ ಪ್ರಬಲ ಪ್ರತಿಸ್ಪರ್ಧಿ ಎದುರಿಸಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ನೇರ ಹೋರಾಟದ ಜೊತೆ ಕಾಂಗ್ರೆಸ್ ಸೆಣಸಲು ಸಾಧ್ಯವಾಗದೇ ಮೂರು ಇಲ್ಲವೇ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಅವಕಾಶ ನೀಡುವ ಮೂಲಕ ತಮ್ಮ ಶಕ್ತಿ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕರಾದ ಶ್ರೀನಿವಾಸ್​ ಅವರನ್ನು ಪಕ್ಷಕ್ಕೆ ಕರೆತರಲು ಕಸರತ್ತು ಆರಂಭವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: MES ಪುಂಡಾಟಿಕೆ: ಮಹಾರಾಷ್ಟ್ರ ನಕಾಶೆಯಲ್ಲಿ ಬೆಳಗಾವಿ ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.