ETV Bharat / state

ಎಲ್ಲೆಂದರಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಡಿವಾಣ - ಬೆಂಗಳೂರು ಸುದ್ದಿ

ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕುವ ಉದ್ದೇಶದಿಂದ ತ್ಯಾಜ್ಯ ಸಾಗಾಟದ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
author img

By

Published : Dec 24, 2020, 10:47 AM IST

ಬೆಂಗಳೂರು: ಎಲ್ಲೆಂದರಲ್ಲಿ ಕೈಗಾರಿಕಾ ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕುವ ಸಂಬಂಧ ತ್ಯಾಜ್ಯ ಸಾಗಾಟದ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಬೇಕು ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಎಸ್.ಶ್ರೀನಿವಾಸಲು ಆದೇಶಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಈ ಮೂಲಕ ತ್ಯಾಜ್ಯ ನಿರ್ವಹಣೆ ಸಂಪರ್ಕವನ್ನು ನೇರವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಂಟ್ರೋಲ್ ರೂಂಗೆ ಕಲ್ಪಿಸಬೇಕೆಂದು ಅವರು ತಿಳಿಸಿದ್ದಾರೆ. ಈ ರೀತಿ ಜಿಪಿಎಸ್​ ಅಳವಡಿಸಿದರೆ ಅಪಾಯಕಾರಿ ತ್ಯಾಜ್ಯದ ಬೇಕಾಬಿಟ್ಟಿ ವಿಲೇವಾರಿಗೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಓದಿ: ದೇಶದಲ್ಲಿ ನಿನ್ನೆಗಿಂತ ಶೇ.3ರಷ್ಟು ಸೋಂಕಿತ ಪ್ರಕರಣ ಹೆಚ್ಚಳ; ಮುನ್ನೆಚ್ಚರಿಕೆಯೇ ಮದ್ದು

ತ್ಯಾಜ್ಯವನ್ನು ಸಂಸ್ಕರಣೆ ಮಾಡುವ ಘಟಕಗಳ ನಿರ್ವಹಣೆ ಹಾಗೂ ಸಾಗಾಣಿಕೆಯ ವಾಹನಗಳಲ್ಲಿ ಕೆಲವು ನಿರ್ದಿಷ್ಟ ನಿಯಮಗಳನ್ನು ಸೂಚಿಸಲಾಗಿದೆ. ಈ ನಿಯಮಗಳ ಉಲ್ಲಂಘನೆಯಾದರೆ ಪರಿಸರ (ಸಂರಕ್ಷಣೆ) -1986ರ ಅಡಿ ಕ್ರಮ ಜರುಗಿಸಲಾಗುತ್ತದೆ. ಈ ಸಂಬಂಧ ಹಲವು ನಿರ್ದೇಶನಗಳನ್ನು ಮಂಡಳಿ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.