ETV Bharat / state

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿದ ಕೆಪಿಸಿಸಿ ನಿಯೋಗ

ಮಾಜಿ ಮೇಯರ್ ರಾಮಚಂದ್ರಪ್ಪ ನೇತೃತ್ವದ ನಿಯೋಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬೆಂಗಳೂರಿನ 12 ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್‌ಗಳ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದರು.

poor-road-work-kpcc-delegation-complaining-to-lokayukta-against-cs
ಸಿಎಸ್ ವಿರುದ್ಧ ಲೋಕಾಯುಕ್ತಗೆ ದೂರು ನೀಡಿದ ಕೆಪಿಸಿಸಿ ನಿಯೋಗ
author img

By

Published : Jul 30, 2021, 5:04 PM IST

ಬೆಂಗಳೂರು: ಬೆಂಗಳೂರು ನಗರದ 12 ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ಕೆಪಿಸಿಸಿ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 12 ಹೈ ಡೆನ್ಸಿಟಿ ಕಾರಿಡರ್​ ಟ್ರಾಫಿಕ್‌ಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದೆ. ಬಿಬಿಎಂಪಿ, ಬಿಡಿಎ, ಬಿ.ಎಂ.ಆರ್‌.ಸಿ.ಎಲ್, ಬೆಂಗಳೂರು ಸ್ಮಾರ್ಟ್‌ಸಿಟಿ ಹಾಗೂ ಇತರ ಸಂಸ್ಥೆಗಳ ಮೂಲಕ ಈಗಾಗಲೇ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅದರಲ್ಲಿ ಅದೇ ರಸ್ತೆಗಳಿಗೆ ಮತ್ತೆ ಕೆ.ಆರ್.ಡಿ.ಸಿ.ಎಲ್ ಮೂಲಕ ಮರು ಅಭಿವೃದ್ಧಿ ಹಾಗೂ ನಿರ್ವಹಣೆಗೆ ಟೆಂಡರ್‌ ಮಂಡಿಸಿ ಅಭಿವೃದ್ಧಿಪಡಿಸಲು ಮುಂದಾಗಿರುವುದು ಮೇಲ್ನೋಟಕ್ಕೆ ಅಕ್ರಮ ನಡೆಯುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕಾಮಗಾರಿಗಳಿಗೆ ನೀಡಿರುವ ಆದೇಶ ಕಾನೂನುಬಾಹಿರ. ಉದ್ದೇಶಪೂರ್ವಕವಾಗಿ ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿ ಅಕ್ರಮದ ಮೂಲಕ ಲೂಟಿ ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಈ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿಯೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಬಿಬಿಎಂಪಿ ಪ್ರಸ್ತಾವನೆಯನ್ನು ಮೊದಲು ಅನುಮೋದಿಸಿ ಸರ್ಕಾರ ನಂತರ ಕೆ.ಆರ್.ಡಿ.ಸಿ.ಎಲ್‌ಗೆ ಈ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ‌.

ತಾಂತ್ರಿಕ ಅರ್ಹತೆ ಪಡೆಯದ ಹಾಗೂ ಕಾಮಗಾರಿಯ ಒಂದು ಪ್ಯಾಕೇಜ್ ಅ​ನ್ನು ಕಪ್ಪು ಪಟ್ಟಿಗೆ ಸೇರಿರುವ ಗುತ್ತಿಗೆದಾರನಿಗೆ ಟೆಂಡರ್‌ ನೀಡಲು ಶಿಫಾರಸ್ಸು ಮಾಡಿರುವುದು ಅಕ್ರಮ ಹಾಗೂ ಭ್ರಷ್ಟಾಚಾರದ ಅನುಮಾನ ಮೂಡಿದೆ ಎಂದು ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಂಪುಟ ರಚನೆ ವಿಚಾರದಲ್ಲಿ ಸಿಎಂ ಯೂ ಟರ್ನ್: ಇದರ ಹಿಂದಿದೆಯೇ ಬಿಎಸ್​ವೈ ತಂತ್ರಗಾರಿಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.