ETV Bharat / state

ನಾಳೆಯಿಂದಲೇ ಬೇಸಿಗೆ ಶುರು, ದಿಢೀರ್ ತಾಪಮಾನ ಏರಿಕೆ ಸಾಧ್ಯತೆ: ಹವಾಮಾನ ಇಲಾಖೆ

ಚಳಿ ಎಂದು ಕಂಬಳಿ ಹೊದ್ದು ಮಲಗುತ್ತಿದ್ದ ಜನರಿಗೆ ಶೀಘ್ರವೇ ಬಿಸಿಲ ಧಗೆ ತಟ್ಟಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Possibility of sudden rise in temperature in state
ರಾಜ್ಯದಲ್ಲಿ ತಾಪಮಾನ ದಿಢೀರ್ ಏರಿಕೆಯಾಗುವ ಸಾಧ್ಯತೆ
author img

By

Published : Feb 23, 2023, 5:49 PM IST

ಬೆಂಗಳೂರು: ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಬರುತ್ತಿದ್ದು, ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 1 ರ ಬದಲಿಗೆ ಫೆಬ್ರವರಿ 24 ರಿಂದಲೇ ಬೇಸಿಗೆ ಆರಂಭವಾಗಲಿದ್ದು, ತಾಪಮಾನ ದಿಢೀರ್ ಹೆಚ್ಚಾಗಲಿದೆ. ಇದು ಶುಷ್ಕ ಹವಾಮಾನದ ಮುನ್ಸೂಚನೆ. ಉತ್ತರ ಮತ್ತು ವಾಯುವ್ಯ ಮಾರುತಗಳು ಬೆಚ್ಚಗಿರುವುದು ಇದಕ್ಕೆ ಕಾರಣ ಎಂದು ತಿಳಿಸಿದೆ.

ಐಎಂಡಿಯ ಬೆಂಗಳೂರು ಕೇಂದ್ರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿ, ಕರ್ನಾಟಕದ ಕೆಲವು ಭಾಗಗಳಲ್ಲಿ ಈಗಾಗಲೇ ಸಾಮಾನ್ಯ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ತಾಪಮಾನ ಸುಮಾರು 31 ರಿಂದ 32 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದರೂ, ಸಾಪೇಕ್ಷ ಆರ್ದ್ರತೆಯ ಮಟ್ಟ ಸುಮಾರು 20 ರಿಂದ 35 ಪ್ರತಿಶತದಷ್ಟಿದ್ದು ನಾಗರಿಕರು ಸೆಖೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

7 ಮಿ.ಮೀ ಮಳೆ ಕಾಣುತ್ತಿದ್ದ ನಗರ: ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ 7 ಮಿಮೀ ಮಳೆಯಾಗುತ್ತದೆ. ಆದರೆ ಈ ವರ್ಷ ಸಂಭವಿಸಿಲ್ಲ. ಮುಂದಿನ ಐದು ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಲಿದೆ. ಮಳೆಯೂ ಇಲ್ಲ, ಮೋಡ ರಚನೆಯೂ ಇಲ್ಲ. ತೇವಾಂಶದ ಸಹಭಾಗಿತ್ವ ನಡೆಯುತ್ತಿದೆ. ಇದು ಮಳೆ ಸಾಧ್ಯತೆ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದರ್: ದಾಖಲೆ ಪ್ರಮಾಣದಲ್ಲಿ ತಾಪಮಾನ ಇಳಿಕೆ; 5.5 ಡಿಗ್ರಿ ಸೆಲ್ಸಿಯಸ್‍ಗೆ ನಡುಗಿದ ಜನರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.