ಬೆಂಗಳೂರು : ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್ (ಪಿವಿಸಿ) ತೆರೆಯುವ ದಿನಾಂಕವನ್ನು ನಿಗದಿಪಡಿಸಲು ಚುನಾವಣಾ ಆಯೋಗ ಸೂಚಿಸಿದೆ. ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನಕ್ಕಾಗಿ ಪೋಸ್ಟಲ್ ವೋಟಿಂಗ್ ಸೆಂಟರನ್ನು ದಿನಾಂಕ ಮೇ 2 ರಿಂದ 6 ರವರೆಗೆ ಮೂರು ದಿನಗಳಲ್ಲಿ ತೆರೆಯುವಂತೆ ತಿಳಿಸಲಾಗಿತ್ತು.
ಇತ್ತೀಚೆಗೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಿರ್ದೇಶಿಸಿದಂತೆ ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕ ಮಾದರಿಯಾಗಿ ಅಂದರೆ ಮೇ 2 ರಿಂದ 4 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅಗತ್ಯ ಕ್ರಮ ವಹಿಸಬೇಕು.
ಇನ್ನು, ಸದರಿ ನಿರ್ದೇಶನವನ್ನು ಸಂಬಂಧಪಟ್ಟ ಎಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು. ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿದ ಮಾರ್ಗಸೂಚಿಗಳನ್ವಯ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಚುನಾವಣಾಧಿಕಾರಿಗಳು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ : ನಾಳೆಯಿಂದ ಎರಡು ದಿನ ವಿಶೇಷ ಮಹಾ ಪ್ರಚಾರ ಅಭಿಯಾನ - ಮತದಾರರ ಮನೆಗೆ ಬಿಜೆಪಿ ನಾಯಕರ ಭೇಟಿ: ಕಟೀಲ್