ETV Bharat / state

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬೆಂಗಳೂರು, ದಾವಣಗೆರೆಯಲ್ಲಿ ಪೋಸ್ಟರ್ ಅಭಿಯಾನ

author img

By

Published : Mar 7, 2023, 12:04 PM IST

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬೆಂಗಳೂರಿನ ಹಲವೆಡೆ ಮತ್ತು ದಾವಣಗೆರೆಯಲ್ಲಿ ಪೋಸ್ಟರ್ ಅಭಿಯಾನ ಆರಂಭವಾಗಿದೆ.

virupakshappa
ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ಪುತ್ರನ ಬಂಧನವಾಗುತ್ತಿದ್ದಂತೆ ಶಾಸಕ, ಕೆಎಸ್​ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ ನಡೆಯುತ್ತಿದೆ. ಬೆಂಗಳೂರಿನ ಹಲವೆಡೆ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, 'ಮೈಸೂರು ಸ್ಯಾಂಡಲ್ ಸೋಪ್ ಹಗರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಅವರು ಎಲ್ಲಿಯಾದರೂ ಕಂಡಲ್ಲಿ ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡುವ ಮೂಲಕ‌ ಲೋಕಾಯುಕ್ತ ತನಿಖೆಗೆ ಸಹಕರಿಸಿ' ಎಂದು ಪೋಸ್ಟರ್‌ ಅಂಟಿಸಲಾಗಿದೆ.

ಈ ಪೋಸ್ಟರ್ ಅಂಟಿಸಿದವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಕೆಎಸ್​ಡಿಎಲ್​ಗೆ ರಾಸಾಯನಿಕ ಪೂರೈಸುವ ಟೆಂಡರ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್‌ ಮಾಡಾಳ್‌ರನ್ನು ಮಾರ್ಚ್ 2ರಂದು ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬಳಿಕ ಕೆಎಸ್​ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿಯೂ ತೀವ್ರ ಶೋಧ ನಡೆಸಿದ್ದರು. ಪರಿಶೀಲನೆಯ ಸಂದರ್ಭದಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಅಪಾರ ಪ್ರಮಾಣದ ನಗದು ಜಪ್ತಿ ಮಾಡಲಾಗಿತ್ತು. ಪುತ್ರನ ಬಂಧನದ ಬಳಿಕ ನೈತಿಕ ಹೊಣೆ ಹೊತ್ತು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ದ ಆಧಾರರಹಿತ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿದ ನ್ಯಾಯಾಲಯ

ನಾಪತ್ತೆ ಪೋಸ್ಟ್​ ಅಂಟಿಸಿದ ದಾವಣಗೆರೆ ಕೈ ಕಾರ್ಯಕರ್ತರು: ಇನ್ನೊಂದೆಡೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕರ ವಿರುದ್ಧ ಹೋರಾಟಕ್ಕಿಳಿದಿದ್ದಾರೆ‌. ಶಾಸಕರನ್ನು ವಜಾಗೊಳಿಸಿ ಎಂದು ಆಗ್ರಹಿಸಿ ಕಳೆದ ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದೀಗ 'ಮಿಸ್ಸಿಂಗ್​' ಅಭಿಯಾನ ಶುರು ಮಾಡಿದ್ದಾರೆ. 'ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ' ಎಂದು ಗೋಡೆಗಳಿಗೆ ಪೋಸ್ಟರ್ ಹಚ್ಚಲಾಗಿದೆ. ದಾವಣಗೆರೆ ಹಾಗು ಚನ್ನಗಿರಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪೋಸ್ಟರ್ ಕಂಡುಬಂದಿದೆ.

ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಮತ್ತು ತಮ್ಮ ವಿರುದ್ಧದ ಎಫ್​ಐಆರ್ ರದ್ದತಿಗೆ ಹೈಕೋರ್ಟ್ ಮೆಟ್ಟಿಲೇರಿದ ಮಾಡಾಳ್ ವಿರುಪಾಕ್ಷಪ್ಪ

ಇಬ್ಬರು ತನಿಖಾಧಿಕಾರಿಗಳ ಬದಲಾವಣೆ: ಮಾಡಾಳ್​ ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ತನಿಖಾಧಿಕಾರಿಗಳನ್ನು ಸರ್ಕಾರ ಬದಲಾವಣೆ ಮಾಡಿದೆ. ಡಿವೈಎಸ್ಪಿ ಪ್ರಮೋದ್​ ಕುಮಾರ್​ ಮತ್ತು ಇನ್ಸ್​ಪೆಕ್ಟರ್​ ಕುಮಾರಸ್ವಾಮಿ ಅವರ ಸ್ಥಾನಕ್ಕೆ ಡಿವೈಎಸ್ಪಿ ಆಂಥೋನಿ ಜಾನ್​ ಹಾಗೂ ಇನ್ಸ್​ಪೆಕ್ಟರ್​ ಬಾಲಾಜಿ ಬಾಬು ನೇಮಕಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.