ETV Bharat / state

ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣ.. ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ - Postponement of actress Ragini's bail application in supreme

ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಯಾವುದೇ ವಾದ, ಪ್ರತಿವಾದ ಆಲಿಸದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

ಸುಪ್ರೀಂ
ಸುಪ್ರೀಂ
author img

By

Published : Jan 8, 2021, 1:50 PM IST

ನವದೆಹಲಿ/ ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಯಾವುದೇ ವಾದ, ಪ್ರತಿವಾದ ಆಲಿಸದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ನಟಿ ರಾಗಿಣಿ ಪರವಾಗಿ ವಕೀಲರಾದ ಶಾಹಿಲ್ ಭಾಲೈಕ್, ಸುಪ್ರಿಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿಸೆಂಬರ್ 26 ರಂದು ಅಧಿಕೃತವಾಗಿ ಸ್ಕ್ರೂಟನಿ ಆಗಿದ್ದ ಜಾಮೀನು ಅರ್ಜಿ, ಮೊದಲು ಜನವರಿ 4ಕ್ಕೆ ಲಿಸ್ಟ್​​ ಆಗಿತ್ತು. ಇತ್ತ ಜಾಮೀನು ನೀಡದಂತೆ ಸಿಸಿಬಿ ಅರ್ಜಿ ಸಲ್ಲಿಸಿ ಮನವಿ ಮಾಡಿತ್ತು.

CCB ಪರ ಸುಪ್ರಿಂಕೋರ್ಟ್ ವಕೀಲ ತುಷಾರ್ ಮೆಹ್ತಾ ವಾದ ಮಂಡಿಸಿದ್ದು, ಹೈಕೋರ್ಟ್​​ನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಪುನಃ ಪ್ರಸ್ತಾಪಿಸಿ ಅರ್ಜಿ ಸಲ್ಲಿಕೆ ಮಾಡಿದ್ದರು. ಡ್ರಗ್ಸ್ ಸೇವನೆ ಅಷ್ಟೇ ಅಲ್ಲದೇ ಮಾರಾಟ ಮಾಡುತ್ತಿದ್ದ ಬಗ್ಗೆ ಹೇಳಲಾಗಿದೆ. ಆ ಕಾರಣಕ್ಕೆ ಇವರ ವಿರುದ್ಧ ಎನ್​​​ಡಿಪಿಎಸ್​​ ಆಕ್ಟ್ 27ಎ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.