ETV Bharat / state

ಪ್ರತಿ 3ನೇ ಶನಿವಾರ ರಾಜ್ಯಾದ್ಯಂತ ವಿದ್ಯುತ್​ ಅದಾಲತ್ ​: ಸಚಿವ ಸುನಿಲ್​ ಕುಮಾರ್

ರಾಜ್ಯಾದ್ಯಂತ ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್ ನಡೆಯಬೇಕು ಎಂದು ಸಚಿವ ಸುನಿಲ್​ ಕುಮಾರ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ನೀಡುವುದು ಇದರ ಮೂಲ ಉದ್ದೇಶವಾಗಿದೆ..

Energy Minister Sunil Kumar notifies officials
ಸಚಿವ ಸುನಿಲ್​ ಕುಮಾರ್
author img

By

Published : Jun 5, 2022, 4:15 PM IST

ಬೆಂಗಳೂರು : ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಬೇಕೆಂದು ಇಂಧನ ಸಚಿವ ಸುನಿಲ್‌ಕುಮಾರ್​ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ನೀಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಎಲ್ಲ ಹಳ್ಳಿಗಳಿಗೆ ಭೇಟಿ : ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಅಧಿಕಾರಿಗಳು ಕಡ್ಡಾಯವಾಗಿ ಭಾಗಿ : ಸಹಾಯಕ ಕಾರ್ಯಪಾಲಕ ಇಂಜಿನಿಯರ್​ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ನಾಲ್ಕು ದಿನದಿಂದ ಹಾವಿನ ಜೊತೆ ಅಜ್ಜಿಯ ವಾಸ: ಮೃತಪಟ್ಟ ಪತಿ ಉರಗ ರೂಪದಲ್ಲಿ ಬಂದ್ನಾ!?

ಇ-ಮೇಲ್​ ಮೂಲಕ ಸರ್ಕಾರಕ್ಕೆ ವಿವರ : ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ಪ್ರತಿ 3ನೇ ಸೋಮವಾರ ತಪ್ಪದೇ emg1energy@gpail.com ಇ-ಮೇಲ್​ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.