ETV Bharat / state

ವಿದ್ಯುತ್‌ ಬೆಲೆ ಏರಿಕೆ ಶೀಘ್ರ ಹಿಂಪಡೆಯಬೇಕು: ಭಾಸ್ಕರ್‌ ರಾವ್‌ ಆಗ್ರಹ

author img

By

Published : Sep 28, 2022, 6:43 PM IST

ದೆಹಲಿಯಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸಲಾಗುತ್ತಿದೆ, ಆದರೆ, ಕರ್ನಾಟಕದಲ್ಲಿ ಏಕೆ ಕಲ್ಲಿದ್ದಲು ಬೆಲೆ ಏರಿಯಾಗಿದೆ ಎಂದು ದರ ಏರಿಸ ಬೇಕು ಎಂದು ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Bhaskar Rao
ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌

ಬೆಂಗಳೂರು: ಅಕ್ಟೋಬರ್‌ 1ರಿಂದ ವಿದ್ಯುತ್‌ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಶೀಘ್ರವೇ ಹಿಂಪಡೆಯಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಭಾಸ್ಕರ್‌ ರಾವ್‌, ಕಲ್ಲಿದ್ದಲು ಬೆಲೆಯಲ್ಲಿ ಸಣ್ಣ ಏರಿಕೆಯಾಗಿದ್ದನ್ನು ನೆಪ ಮಾಡಿಕೊಂಡು ಜನರಿಗೆ ವಿದ್ಯುತ್‌ ಶಾಕ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕಲಿದ್ದಲು ಬೆಲೆ ಇಳಿಕೆಯಾದಾಗ ಸರ್ಕಾರವು ವಿದ್ಯುತ್‌ ದರವನ್ನು ಇಳಿಕೆ ಮಾಡುವುದಿಲ್ಲ.

ಹೀಗಿರುವಾಗ ಕಲ್ಲಿದ್ದಲು ಬೆಲೆ ಏರಿಕೆಯಾದಾಗ ವಿದ್ಯುತ್‌ ದರ ಏರಿಕೆ ಮಾಡುವುದು ಎಷ್ಟು ಸರಿ? ಸರ್ಕಾರಿ ಕಚೇರಿಗಳು ಬಾಕಿ ಉಳಿಸಿಕೊಂಡಿರುವ ಸಾವಿರಾರು ಕೋಟಿ ರೂಪಾಯಿಯನ್ನು ವಸೂಲಿ ಮಾಡದ ಕಾರಣಕ್ಕೆ ವಿದ್ಯುತ್‌ ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಆ ನಷ್ಟವನ್ನು ಜನರ ತಲೆಗೆ ಕಟ್ಟುವುದು ಸರ್ಕಾರದ ಅಸಮರ್ಥತೆ ತೋರಿಸುತ್ತಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತದೆ. ಆದರೂ ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಪ್ರತಿ ಕುಟುಂಬಕ್ಕೂ ತಿಂಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುತ್ತಿದೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರ ಬಂದ ನಂತರ ಅಲ್ಲಿ ವಿದ್ಯುತ್‌ ದರವನ್ನು ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿ ಸಾಧ್ಯವಾಗಿದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ನಾವೆಲ್ಲ ಗಂಭೀರವಾಗಿ ಯೋಚಿಸಬೇಕಿದೆ. ಜನರು ಪಾವತಿಸುವ ಶುಲ್ಕವು ಭ್ರಷ್ಟರ ಪಾಲಾಗುತ್ತಿದ್ದರೆ, ಎಷ್ಟೇ ಶುಲ್ಕ ಏರಿಕೆ ಮಾಡಿದರೂ ಸಂಸ್ಥೆಗಳು ನಷ್ಟದಲ್ಲೇ ಮುಂದುವರಿಯುತ್ತವೆ ಎಂದಿದ್ದಾರೆ.

ಮೂರು ಬಾರಿಯ ವಿದ್ಯುತ್ ದರ ಏರಿಕೆ ಖಂಡನೀಯ: ಸಿಎಂ ಬೊಮ್ಮಾಯಿಯವರ ಬಿಜೆಪಿ ಸರ್ಕಾರವು ಕಳೆದ ಒಂದು ವರ್ಷದಲ್ಲಿ ಮೂರನೇ ಸಲ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ. ಪದೇ ಪದೆ ವಿದ್ಯುತ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಬೇಕು. ಅಗತ್ಯ ವಸ್ತುಗಳು ಹಾಗೂ ಅಗತ್ಯ ಸೌಲಭ್ಯಗಳ ಬೆಲೆ ಏರಿಕೆಯು ಮುಂದಿನ ಚುನಾವಣೆಗಳಲ್ಲಿ ಪ್ರಮುಖ ವಿಷಯವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.