ETV Bharat / state

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಹಣಕಾಸು ಇಲಾಖೆಗೆ ಪ್ರಸ್ತಾವನೆ

author img

By

Published : Feb 3, 2021, 5:11 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ), 39 ಮುಖ್ಯ ಪಶು ವೈದ್ಯಾಧಿಕಾರಿ, 10 ಹಿರಿಯ ಪಶು ವೈದ್ಯಾಧಿಕಾರಿ, 17 ಪಶು ವೈದ್ಯಾಧಿಕಾರಿ ಸೇರಿದಂತೆ ಒಟ್ಟು 72 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವ ಪ್ರಭು ಚೌವ್ಹಾಣ್​ ತಿಳಿಸಿದರು.

prabhu-chauhan-assembly-minister
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕಿದ ಕೂಡಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್

ಓದಿ: 'ನೀನು ವಿಸ್ಕಿ ಕುಡಿದಿದ್ದೇನಪ್ಪಾ ಲಿಂಬಾವಳಿ'.. ಸಿದ್ದರಾಮಯ್ಯ ಹಾಕಿದ ಪ್ರಶ್ನೆಗೆ ತಬ್ಬಿಬ್ಬಾದ ಸಚಿವರು..

ಇಂದು ಪ್ರಶ್ನೋತ್ತರ ವೇಳೆ ಸದಸ್ಯ ಡಾ. ಭರತ್ ಶೆಟ್ಟಿ.ವೈ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಶೇ. 50ರಷ್ಟು ಹುದ್ದೆಗಳು ಖಾಲಿಯಿವೆ. ಈ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊರೊನಾ ಕಾರಣದಿಂದ ಇದು ವಿಳಂಬವಾಗಿದೆ. ಮತ್ತೊಮ್ಮೆ ಮನವಿ ಮಾಡಿ ಆದಷ್ಟು ಶೀಘ್ರ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ), 39 ಮುಖ್ಯ ಪಶು ವೈದ್ಯಾಧಿಕಾರಿ, 10 ಹಿರಿಯ ಪಶು ವೈದ್ಯಾಧಿಕಾರಿ, 17 ಪಶು ವೈದ್ಯಾಧಿಕಾರಿ ಸೇರಿದಂತೆ ಒಟ್ಟು 72 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಮಂಜೂರಾಗಿರುವ ಹುದ್ದೆಗಳಲ್ಲಿ 33 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 39 ಹುದ್ದೆಗಳು ಖಾಲಿಯಿವೆ. ಸದ್ಯಕ್ಕೆ ಕೋವಿಡ್ ಕಾರಣ ಹೊರಗುತ್ತಿಗೆ ಆಧಾರದ ಮೇಲೆ ಪಶುವೈದ್ಯರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. ಎಲ್ಲೆಲ್ಲಿ, ಯಾವ ಜಿಲ್ಲೆಗಳಲ್ಲಿ ಹುದ್ದೆಗಳಿವೆಯೋ ಅಂತಹ ಕಡೆ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಹತ್ಯೆ, ಗೋ ಸಾಗಾಣಿಕೆದಾರರು ಮತ್ತು ಗೋ ಕಳ್ಳರನ್ನು ತಡೆಯುವುದು ಬಹುದೊಡ್ಡ ಸವಾಲಾಗಿದೆ.

ಇಲ್ಲಿ ಕೇರಳ ಭಾಗದಿಂದ ಗೋವುಗಳನ್ನು ಭಾರೀ ಪ್ರಮಾಣದಲ್ಲಿ ಸಾಗಾಣಿಕೆ ಮಾಡುತ್ತಾರೆ. ಕೆಲವು ಕಡೆ ಮಟನ್ ಅಂಗಡಿಗಳಲ್ಲಿ ದನದ ಮಾಂಸವನ್ನು ನೀಡುತ್ತಾರೆ. ಇದನ್ನು ಪರೀಕ್ಷಿಸುವವರೇ ಇಲ್ಲ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.