ETV Bharat / state

ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿ ಗೋ ಪೂಜೆ ನೆರವೇರಿಸಿದ ಸಚಿವ ಪ್ರಭು ಚೌವ್ಹಾಣ್! - ಗೋ ಪೂಜೆ ನೆರವೇರಿಸಿದ ಪ್ರಭು ಚಹ್ವಾಣ್

ಗೋ ಹತ್ಯೆ ನಿಷೇಧ ವಿಧೇಯಕವನ್ನು ಸದನದಲ್ಲಿ ಮಂಡಿಸಿದ ನಂತರ ವಿಧಾನಸೌಧದ ಮುಂಭಾಗದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು.

prabhu chauhan offered puja to cows near Vidhana soudha
ಗೋ ಹತ್ಯೆ ನಿಷೇಧ ಕಾಯ್ದೆ ಮಂಡಿಸಿ ಗೋ ಪೂಜೆ ನೆರವೇರಿಸಿದ ಪ್ರಭು ಚೌವ್ಹಾಣ್
author img

By

Published : Dec 9, 2020, 7:04 PM IST

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ಮಂಡಿಸುತ್ತಿದ್ದಂತೆ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​ ಗೋವುಗಳಿಗೆ ಪೂಜೆ ನೆರವೇರಿಸಿದ್ದಾರೆ.

ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿ ಗೋ ಪೂಜೆ ನೆರವೇರಿಸಿದ ಪ್ರಭು ಚೌವ್ಹಾಣ್

ಗೋ ಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಮಂಡಿಸಿದ ನಂತರ ವಿಧಾನಸೌಧದ ಮುಂಭಾಗದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು. ವಿಧೇಯಕ ಮಂಡಿಸಲು ನಿರ್ಧರಿಸಿದ್ದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಬಿಬಿಎಂಪಿ ವಾಹನದಲ್ಲಿ ಗೋವುಗಳನ್ನು ವಿಧಾನಸೌಧಕ್ಕೆ ತಂದಿದ್ದು, ಪಶುಸಂಗೋಪನಾ ಸಚಿವ ಪ್ರಭು‌ ಚವ್ಹಾಣ್ ಪೂಜೆ ಸಲ್ಲಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕಿ ರೂಪಾಲಿ ನಾಯ್ಕ್ ಸಚಿವರಿಗೆ ಸಾಥ್ ನೀಡಿದರು. ಗೋವುಗಳಿಗೆ ಪೂಜೆ ಸಲ್ಲಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡುವುದಾಗಿ ಕೊಟ್ಟಿದ್ದ ಮಾತನ್ನು ಬಿಜೆಪಿ ಉಳಿಸಿಕೊಂಡಿದೆ ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.